ಅಮಿತ್ ಶಾ ಬಗ್ಗೆ ಕಮೆಂಟ್; ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಗೆ ಜಾಮೀನು

ಬೆಂಗಳೂರು, ಆಗಸ್ಟ್ 05 : ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಆನಂದ್ ಪ್ರಸಾದ್‌ಗೆ ಜಾಮೀನು ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆನಂದ್ ಪ್ರಸಾದ್ ಬಂಧಿಸಿದ್ದರು. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ಖಚಿತವಾಗಿತ್ತು. ಬಳಿಕ ಕೆಲವು ಪೋಸ್ಟ್‌ಗಳಿಗೆ ಆನಂದ್ ಅವಹೇಳನಕಾರಿ ಕಮೆಂಟ್ ಹಾಕಿದ್ದರು ಎಂಬುದು ಆರೋಪ.

ಆನಂದ್ ಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಕೆಪಿಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ. ಬೆಂಗಳೂರಿನ ಕೆ. ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂದು ತಿಳಿದುಬಂದಿದೆ.

Congress IT Cell Secretary Anand Prasad Gets Bail

ಕೇಂದ್ರ ಅಮಿತ್ ಶಾ ಆರೋಗ್ಯ ಸ್ಥಿತಿ ಬಗ್ಗೆ ಕೆಲವರು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ಗಳಿಗೆ ಆನಂದ್ ಪ್ರಸಾದ್ ಅವಹೇಳನಕಾರಿ ಕಮೆಂಟ್ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಪೊಲೀಸರು ಬಂಧಿಸಿದ್ದರು.

ಕ್ರಮ ಕೈಗೊಳ್ಳಿ : ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೋವಿಡ್ ಸೋಂಕು ತಗುಲಿದೆ. ಸಿದ್ದರಾಮಯ್ಯ ಬಗ್ಗೆಯೂ ಅವಹೇಳನಕಾರಿ ಕಮೆಂಟ್ ಹಾಕಲಾಗುತ್ತಿದೆ. ಕಮೆಂಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+