ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಿತ್ ಶಾ ಬಗ್ಗೆ ಕಮೆಂಟ್; ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಗೆ ಜಾಮೀನು

|
Google Oneindia Kannada News

ಬೆಂಗಳೂರು, ಆಗಸ್ಟ್ 05 : ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಆನಂದ್ ಪ್ರಸಾದ್‌ಗೆ ಜಾಮೀನು ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆನಂದ್ ಪ್ರಸಾದ್ ಬಂಧಿಸಿದ್ದರು. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ಖಚಿತವಾಗಿತ್ತು. ಬಳಿಕ ಕೆಲವು ಪೋಸ್ಟ್‌ಗಳಿಗೆ ಆನಂದ್ ಅವಹೇಳನಕಾರಿ ಕಮೆಂಟ್ ಹಾಕಿದ್ದರು ಎಂಬುದು ಆರೋಪ.

ಗೃಹ ಸಚಿವ ಅಮಿತ್ ಶಾ ಬಗ್ಗೆ ಕಮೆಂಟ್; ಕೆಪಿಸಿಸಿ ಸದಸ್ಯನ ಬಂಧನಗೃಹ ಸಚಿವ ಅಮಿತ್ ಶಾ ಬಗ್ಗೆ ಕಮೆಂಟ್; ಕೆಪಿಸಿಸಿ ಸದಸ್ಯನ ಬಂಧನ

ಆನಂದ್ ಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಕೆಪಿಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ. ಬೆಂಗಳೂರಿನ ಕೆ. ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂದು ತಿಳಿದುಬಂದಿದೆ.

ಅಮಿತ್ ಶಾಗೆ ಕೊರೊನಾ, ಮೋದಿ ಸೇರಿ ಕೇಂದ್ರ ನಾಯಕರಿಗೆ ಆತಂಕ!ಅಮಿತ್ ಶಾಗೆ ಕೊರೊನಾ, ಮೋದಿ ಸೇರಿ ಕೇಂದ್ರ ನಾಯಕರಿಗೆ ಆತಂಕ!

Congress IT Cell Secretary Anand Prasad Gets Bail

ಕೇಂದ್ರ ಅಮಿತ್ ಶಾ ಆರೋಗ್ಯ ಸ್ಥಿತಿ ಬಗ್ಗೆ ಕೆಲವರು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ಗಳಿಗೆ ಆನಂದ್ ಪ್ರಸಾದ್ ಅವಹೇಳನಕಾರಿ ಕಮೆಂಟ್ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಪೊಲೀಸರು ಬಂಧಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾವೈರಸ್ ಪಾಸಿಟಿವ್! ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾವೈರಸ್ ಪಾಸಿಟಿವ್!

ಕ್ರಮ ಕೈಗೊಳ್ಳಿ : ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೋವಿಡ್ ಸೋಂಕು ತಗುಲಿದೆ. ಸಿದ್ದರಾಮಯ್ಯ ಬಗ್ಗೆಯೂ ಅವಹೇಳನಕಾರಿ ಕಮೆಂಟ್ ಹಾಕಲಾಗುತ್ತಿದೆ. ಕಮೆಂಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

English summary
KPCC member and secretary of Karnataka Congress IT Cell Anand Prasad get the bail. He arrested by police for posting a derogatory post on union home minister Amit Shah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X