6 ವರ್ಷಕ್ಕೆ ಒಂದನೇ ತರಗತಿ: ಸರ್ಕಾರದ ಗೊಂದಲದ ನಿರ್ಧಾರಕ್ಕೆ ಕಾಂಗ್ರೆಸ್ ಗರಂ
ಬೆಂಗಳೂರು ಜುಲೈ 28: ಮಕ್ಕಳಿಗೆ 6 ವರ್ಷ ತುಂಬಿದ ಬಳಿಕ ಒಂದನೇ ತರಗತಿ ದಾಖಲಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ. ರಾಜ್ಯದೆಲ್ಲೆಡೆ ಶಾಲಾ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶಕ್ಕೂ ಮುನ್ನ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದಿಲ್ಲ. ಹೀಗಾಗಿ ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
ರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ ಅಥವಾ ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ಕೂ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.
Koo Appರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ, ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ. -@RameshBabuKPCC - ಕರ್ನಾಟಕ ಕಾಂಗ್ರೆಸ್ (@inckarnataka) 28 July 2022
ಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ.
Koo Appಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ. - @RameshBabuKPCC - ಕರ್ನಾಟಕ ಕಾಂಗ್ರೆಸ್ (@inckarnataka) 28 July 2022

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪರೀಕ್ಷಾ ಮಂಡಳಿಯ ಮೂಲಕ ಖಾಸಗಿ ಸಂಸ್ಥೆ ಬಳಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಇಲಾಖೆಯ ಹಣವನ್ನು ವೈಯಕ್ತಿಕ ಹಾಗೂ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಸಚಿವರಿಂದ ಆ ಹಣವನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications