ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

6 ವರ್ಷಕ್ಕೆ ಒಂದನೇ ತರಗತಿ: ಸರ್ಕಾರದ ಗೊಂದಲದ ನಿರ್ಧಾರಕ್ಕೆ ಕಾಂಗ್ರೆಸ್ ಗರಂ

|
Google Oneindia Kannada News

ಬೆಂಗಳೂರು ಜುಲೈ 28: ಮಕ್ಕಳಿಗೆ 6 ವರ್ಷ ತುಂಬಿದ ಬಳಿಕ ಒಂದನೇ ತರಗತಿ ದಾಖಲಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಕಾಂಗ್ರೆಸ್ ಕಿಡಿ ಕಾರಿದೆ. ರಾಜ್ಯದೆಲ್ಲೆಡೆ ಶಾಲಾ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶಕ್ಕೂ ಮುನ್ನ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದಿಲ್ಲ. ಹೀಗಾಗಿ ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ ಅಥವಾ ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ ಎಂದು ಕಾಂಗ್ರೆಸ್ ಕೂ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.

ಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ.

Congress Lashes Out At Govt Over 1st Standard Criteria

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪರೀಕ್ಷಾ ಮಂಡಳಿಯ ಮೂಲಕ ಖಾಸಗಿ ಸಂಸ್ಥೆ ಬಳಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಇಲಾಖೆಯ ಹಣವನ್ನು ವೈಯಕ್ತಿಕ ಹಾಗೂ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಸಚಿವರಿಂದ ಆ ಹಣವನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

English summary
The state government has issued an order to enroll children in the first class after they reach 6 years of age, and the Congress has oppose against it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X