ಕಾಂಗ್ರೆಸ್ ಮುಖಂಡ ಮದನ್ ಪಟೇಲ್ ಗೆ ಜೀವಬೆದರಿಕೆ
ಬೆಂಗಳೂರು, ಆ.07 : ನಿರ್ಮಾಪಕ, ಕಾಂಗ್ರೆಸ್ ಮುಖಂಡ ಮದನ್ ಪಟೇಲ್ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಪಕ್ಷದ ಮುಖಂಡರೊಬ್ಬರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಸೋಮವಾರ ಮದನ್ ಪಟೇಲ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಮಗೆ ಜೀವ ಬೆದರಿಕೆ ಇದೆ ಎಂದು ದೂರು ನೀಡಿದ್ದಾರೆ. ಸಿ.ವಿ.ರಾಮನ್ ನಗರದ ರಮೇಶ್ ಎಂಬ ಕಾಂಗ್ರೆಸ್ ಮುಖಂಡರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿ.ವಿ.ರಾಮನ್ ನಗರದಲ್ಲಿ ಓಡಾಡಬಾರದು ಎಂದು ರಮೇಶ್ ದೂರವಾಣಿ ಕರೆ ಮಾಡಿ ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮದನ್ ಪಟೇಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರೇ ಜೀವ ಬೆದರಿಕೆ ಹಾಕಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೂ ಮದನ್ ಪಟೇಲ್ ದೂರು ಕೊಟ್ಟಿದ್ದಾರೆ.
ನಟ, ನಿರ್ಮಾಪಕ ಮತ್ತು ನಿರ್ದೇಶಕರಾಗಿರುವ ಮದನ್ ಪಟೇಲ್ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ನಂಜನಗೂಡು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತಾನು ಆಸಕ್ತಿ ಹೊಂದಿದ್ದೇನೆ ಎಂದು ಕೆಲವು ತಿಂಗಳ ಹಿಂದೆ ಹೇಳಿದ್ದರು.












Click it and Unblock the Notifications