ಕೊರೊನಾ ಬಗ್ಗೆ ಕಾಂಗ್ರೆಸ್‌ನಿಂದ ಜಾಗೃತಿ ಕಾರ್ಯಕ್ರಮ
ಬೆಂಗಳೂರು, ಮಾರ್ಚ್ 14; ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ವ್ಯಕ್ತಿಯನ್ನು ಆತ ಸೌದಿಯಿಂದ ಬಂದ ಮೇಲೆ ನೂರಾರು ಜನ ಭೇಟಿ ಮಾಡಿದಾರೆ. ಅವರೆಲ್ಲರ ತಪಾಸಣೆ ನಡೆಸಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 19 ಎಲ್ಲೆಡೆ ಹಬ್ಬುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಕೊರೋನಾ ಬಗ್ಗೆಯೂ ಜನಜಾಗೃತಿ ಮಾಡುತ್ತೇವೆ ಎಂದು ಹೇಳಿದರು.
ಸರ್ಕಾರ ಮತ್ತು ಅಧಿಕಾರಿಗಳು ಇಬ್ಬರೂ ಕೊರೊನಾ ಹತ್ತಿಕ್ಕುವ ಕೆಲಸದಲ್ಲಿ ಎಚ್ಚರದಿಂದ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.













Click it and Unblock the Notifications