• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶ್ರೀರಾಮುಲು ಲೆಕ್ಕ ಪಕ್ಕಾ ಇಲ್ಲ ಎಂದ ಸಿದ್ದರಾಮಯ್ಯ: ಮತ್ತೆ ಪ್ರಶ್ನೆಗಳ ಸುರಿಮಳೆ

|

ಬೆಂಗಳೂರು, ಜುಲೈ 21: 'ಕೊರೊನಾ ನಿಯಂತ್ರಣದಲ್ಲಿನ ಅವ್ಯವಹಾರದ ಬಗೆಗಿನ ಆರೋಪಕ್ಕೆ ಉತ್ತರ ನೀಡಲು ಪ್ರಯತ್ನಿಸಿರುವ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಸತ್ಯವನ್ನು ಬಿಚ್ಚಿಡುವ ಬದಲಿಗೆ ಸುಳ್ಳನ್ನು ಮುಚ್ಚಿಡಲು ಪರದಾಡಿದ್ದಾರೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

   Drone Prathap in Police Custody, what next..? | Oneindia Kannada

   ವೈದ್ಯಕೀಯ ಸಾಮಾಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಶ್ರೀರಾಮುಲು ಮತ್ತು ಅಶ್ವಥ್ ನಾರಾಯಣ್ ಲೆಕ್ಕ ನೀಡಿದ್ದರು. ಆದರೆ, ಈ ಲೆಕ್ಕ ಪಕ್ಕಾ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

   ಲೆಕ್ಕ ಕೊಡಿ ಅಂದ್ರೆ ಹಿಂಗೇನ್ರೀ ಕೊಡೋದು? ಬಿಎಸ್ವೈ ಸರಕಾರದ ವಿರುದ್ದ ಸಿದ್ದರಾಮಯ್ಯ ಮತ್ತೆ ವಾಗ್ದಾಳಿ

   ನಾನು ಕೇಳಿರುವ ಯಾವ ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿದ್ದಾರೆನ್ನುವುದು ನನಗೆ ತಿಳಿದಿಲ್ಲ. ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಕಾಣಲಿಲ್ಲ. ಸರ್ಕಾರದೊಳಗೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ. ಮುಂದೆ ಓದಿ.....

   ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ?

   ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ?

   'ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಒಟ್ಟು ರೂ.323 ಕೋಟಿ ಖರ್ಚು ಮಾಡಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ. ಆದರೆ ಅವರು ನೀಡಿರುವ ಲೆಕ್ಕವನ್ನು ಎಷ್ಟೇ ಕೂಡಿಸಿ ಕಳೆದರೂ ಅದು 100 ಕೋಟಿ ರೂಪಾಯಿ ದಾಟುವುದಿಲ್ಲ. ಉಳಿದ ದುಡ್ಡಿಗೆ ಲೆಕ್ಕ ಎಲ್ಲಿದೆ?' ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಪ್ರಶ್ನಿಸಿದ್ದಾರೆ.

   ವೆಂಟಿಲೇಟರ್ ಬೆಲೆಯಲ್ಲಿ ಇಷ್ಟೊಂದು ವ್ಯತ್ಯಾಸವೇಕೆ?

   ವೆಂಟಿಲೇಟರ್ ಬೆಲೆಯಲ್ಲಿ ಇಷ್ಟೊಂದು ವ್ಯತ್ಯಾಸವೇಕೆ?

   'ಪಿಎಂ ಕೇರ್ಸ್ ನಲ್ಲಿ ಕೇಂದ್ರ ಸರ್ಕಾರ ತಲಾ ರೂ.4 ಲಕ್ಷ ಕೊಟ್ಟು ವೆಂಟಿಲೇಟರ್ ಖರೀದಿಸಿದೆ. ನಮ್ಮಲ್ಲಿ ಮಾತ್ರ ವೆಂಟಿಲೇಟರ್‌ಗಳನ್ನು 12 ರಿಂದ 18 ಲಕ್ಷ ರೂಪಾಯಿ ವರೆಗೆ ನೀಡಿ ಖರೀದಿಸಲಾಗಿದೆ. ಅಂತಹ ವಿಶೇಷತೆ ಈ ವೆಂಟಿಲೇಟರ್ ಗಳಲ್ಲೇನಿದೆ? ಇವುಗಳ ಬೆಲೆಯಲ್ಲಿ ಯಾಕೆ ಇಷ್ಟೊಂದು ವ್ಯತ್ಯಾಸ?' ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

   ಶ್ರೀರಾಮುಲು ಲೆಕ್ಕ: ಸಿದ್ದರಾಮಯ್ಯ ಆರೋಪಗಳಿಗೆ ಪಿನ್ ಟು ಪಿನ್ ಉತ್ತರ

   ತಾಂತ್ರಿಕ ದಾಖಲೆಗಳು ಬೇಕು ಅಲ್ಲವೇ?

   ತಾಂತ್ರಿಕ ದಾಖಲೆಗಳು ಬೇಕು ಅಲ್ಲವೇ?

   'ಆರೋಗ್ಯ ಸಚಿವರು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ, ಖರೀದಿ ಮಾಡಿರುವ ಸಲಕರಣೆಗಳ ದುಬಾರಿ ದರವನ್ನು ಸಮರ್ಥಿಸುತ್ತಾ, ದರ ವ್ಯತ್ಯಾಸಕ್ಕೆ ಗುಣಮಟ್ಟದಲ್ಲಿನ ವ್ಯತ್ಯಾಸ ಕಾರಣ ಎಂದು ಹೇಳಿದ್ದಾರೆ. ಆದರೆ ಇದನ್ನು ತಾಂತ್ರಿಕವಾಗಿ ಸಮರ್ಥಿಸುವ ಯಾವ ದಾಖಲೆಗಳನ್ನು ಯಾಕೆ ನೀಡಿಲ್ಲ?' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

   ಸಲಕರಣೆಗಳ ಲೆಕ್ಕ ಮಾತ್ರ ಕೇಳಿದ್ದಲ್ಲ

   ಸಲಕರಣೆಗಳ ಲೆಕ್ಕ ಮಾತ್ರ ಕೇಳಿದ್ದಲ್ಲ

   'ನಾನು ಕೊರೊನಾ ನಿಯಂತ್ರಣದ ಸಲಕರಣೆಗಳ ಲೆಕ್ಕ ಮಾತ್ರ ಕೇಳಿದ್ದಲ್ಲ. ಆಹಾರ ಧಾನ್ಯ, ಮತ್ತು ಆಹಾರ ಸಾಮಗ್ರಿಗಳ ಕಿಟ್, ಮತ್ತು ಆಸ್ಪತ್ರೆಗಳಿಗೆ‌ ಖರೀದಿಸಲಾದ ಬೆಡ್ ಗಳ ಬೆಲೆ, ಕ್ವಾರಂಟೈನ್ ಕೇಂದ್ರಗಳು, ಐಸೋಲೇಷನ್ ವಾರ್ಡ್ ಗಳಿಗೆ ಆಗಿರುವ ಖರ್ಚಿನ ವಿವರವನ್ನೂ ಕೇಳಿದ್ದೇನೆ. ಆ ಲೆಕ್ಕ‌ ಎಲ್ಲಿದೆ?' ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

   English summary
   Health minister Sriramulu and ashwath narayana have not answered any of my questions which were raised earlier says siddaramaiah.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X