Congress CLP Meeting: ಸಿಎಂ ಖುರ್ಚಿಗೆ ಶುರುವಾದ ಹಗ್ಗಜಗ್ಗಾಟ: ಡಿಕೆಶಿ - ಸಿದ್ದರಾಮಯ್ಯ ಪ್ರತ್ಯೇಕ ಸಭೆ
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ, ಸಭೆಯಲ್ಲಿ ಪ್ರಮಾಣ ವಚನ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಮುಂದಿನ ಸಿಎಂ ಬಗ್ಗೆ ಕೂಡ ನಿರ್ಧಾರ ಮಾಡುವ ಸಾಧ್ಯತೆ ಇದೆ. ಎಲ್ಲಾ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ.
ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಜೋರಾಗಿ ನಡೆಯುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ಭಾರಿ ಕಸರತ್ತು ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಉಭಯ ನಾಯಕರು ಈಗಾಗಲೇ ತಮ್ಮ ಬೆಂಬಲಿಗರ ಜೊತೆ ಪ್ರತ್ಯೇಕವಾಗಿ ಸಭೆ ಮಾಡುತ್ತಿದ್ದಾರೆ.

ಈಗಾಗಲೇ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಬೆಂಬಲಿಗರು ಶಾಂಗ್ರಿಲಾ ಹೋಟೆಲ್‌ನ ಹೊರಗಡೆ ಘೋಷಣೆ ಕೂಗಿದ್ದಾರೆ. ಡಿಕೆ ಶಿವಕುಮಾರ್ ತಮ್ಮ ನಿವಾಸದಲ್ಲಿ ಬೆಂಬಲಿಗ ಶಾಸಕರ ಜೊತೆ ಸಭೆ ನಡೆಸಿದ್ದು, ಕೊಡಂಗಿದ್ರೆ ಸಿಎಂ ಸ್ಥಾನ ಕೊಡಿ ಸಚಿವ ಸ್ಥಾನ ಬೇಡವೇ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಕೂಡ ಡಿಕೆಶಿಗೆ ಬೆಂಬಲ ನೀಡಿದ್ದಾರೆ.
ಬೆಂಗಳೂರಿನಲ್ಲಿ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ ಈ ಬಾರಿ ಡಿಕೆ ಶಿವಕುಮಾರ್ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಒಕ್ಕಲಿಗ ಮುಖ್ಯಮಂತ್ರಿಗಳು ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಬೆಂಬಲಿಗರ ಜೊತೆ ಸಿದ್ದರಾಮಯ್ಯ ಸಭೆ
ಮತ್ತೊಂದು ಕಡೆ ಸಿದ್ದರಾಮಯ್ಯ ಕೂಡ ಶಾಸಕರ ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. ಸಿಎಂ ರೇಸ್‌ನಲ್ಲಿ ಸಿದ್ದರಾಮಯ್ಯ ಮುಂದಿದ್ದಾರೆ. ಕುರುಬ ಸಮುದಾಯ ಸಿದ್ದರಾಮಯ್ಯ ಅವರನ್ನೆ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿದ್ದಾಗ ಜನಪರ ಆಡಳಿತ ನೀಡಿದ್ದಾರೆ. ಬಡವರಿಗೆ ಉಪಯೋಗವಾಗು ಯೋಜನೆಗಳನ್ನು ನೀಡಿದ್ದು ಅವರೇ ಮತ್ತೊಮ್ಮೆ ಸಿಎಂ ಆಗಬೇಕು ಎಂದು ಒತ್ತಾಯಿಸಲಾಗಿದೆ. ಅನೇಕ ಶಾಸಕರು ಸಿದ್ದರಾಮಯ್ಯ ಪರವಾಗಿದ್ದು, ಸಿಎಂ ಸ್ಥಾನಕ್ಕೆ ಭಾರಿ ಲಾಬಿ ನಡೆಯುವ ಸಾಧ್ಯತೆ ಇದೆ.
ಮತ್ತೊಂದು ಕಡೆ ಮುಸ್ಲಿಂ ಸಮುದಾಯ ಡಿಸಿಎಂ ಮತ್ತು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ಶೇಕಡಾ 80 ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್‌ಗೆ ಬಂದಿದ್ದು, ಮುಸ್ಲಿಂ ಶಾಸಕರನ್ನು ಡಿಸಿಎಂ ಮಾಡಬೇಕು ಮತ್ತು ಪ್ರಮುಖ ಖಾತೆಯನ್ನು ನೀಡಬೇಕು ಎಂದು ಹೇಳಿದ್ದಾರೆ.












Click it and Unblock the Notifications