ರಾಜೀನಾಮೆ ಹಿಂಪಡೆವ ಬಗ್ಗೆ ಯೋಚಿಸಬೇಕು: ರಾಮಲಿಂಗಾ ರೆಡ್ಡಿ

ಬೆಂಗಳೂರು, ಜುಲೈ 14: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿ ಅವರನ್ನು ಕಾಂಗ್ರೆಸ್ ನ ಕೆಲವು ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು.

ಎಐಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಎಚ್‌.ಕೆ.ಪಾಟೀಲ್ ಮತ್ತು ಜೆಡಿಎಸ್ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರು ಇಂದು ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಭೇಟಿಯ ನಂತರ ಮಾತನಾಡಿದ ರಾಮಲಿಂಗಾ ರೆಡ್ಡಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದು ಆದರೆ ಕಾಂಗ್ರೆಸ್ ಪಕ್ಷ ಬಿಟ್ಟಿಲ್ಲ ಎಂದರು.

 Congress leaders met Ramalinga Reddy who resign to MLA post

ರಾಜೀನಾಮೆ ಹಿಂಪಡೆವ ಬಗ್ಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ರಾಜೀನಾಮೆ ನಿರ್ಧಾರಕ್ಕೆ ಬದ್ಧವಾಗಿದ್ದು, ಈ ಬಗ್ಗೆ ಮತ್ತೊಮ್ಮೆ ಯೋಚಿಸುವ ಸಾಧ್ಯತೆಯೇ ಇಲ್ಲ ಎಂದಿದ್ದಾರೆ.

ರಾಮಲಿಂಗಾ ರೆಡ್ಡಿ ಅವರಿಗೆ ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ಸೇರಿದಂತೆ ಹಲವು ಆಫರ್‌ಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಆದರೆ ರಾಮಲಿಂಗಾ ರೆಡ್ಡಿ ಅವರು ಯಾವುದಕ್ಕೂ ಒಪ್ಪಿಲ್ಲ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+