ಸಿಎಂ ಮನೆ ಮುತ್ತಿಗೆ ಯತ್ನ: ಕಾಂಗ್ರೆಸ್ ಮುಖಂಡರು ಪೊಲೀಸರ ವಶಕ್ಕೆ
Recommended Video
ಬೆಂಗಳೂರು, ಫೆಬ್ರವರಿ 15: ಬೀದರ್‌ನ ಶಾಹಿನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಸಿಎಂ ಗೃಹಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಮೌರ್ಯ ವೃತ್ತದ ಗಾಂಧಿ ಪ್ರತಿಮೆಯಿಂದ ಮಧ್ಯಾಹ್ನ 11 ಗಂಟೆಗೆ ಪಾದಯಾತ್ರೆ ಆರಂಭಗೊಂಡಿತ್ತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೇಂದ್ರ ಪೌರತ್ವ ಕಾಯ್ದೆಯನ್ನು ಟೀಕಿಸಿ ನಾಟಕ ಮಾಡಿದ್ದಕ್ಕೆ ಬೀದರ್‌ನ ಶಾಲೆಯ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಾಗಿತ್ತು. ಬೀದರ್‌ನ ಶಾಹೀನ್ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು ನಾಟಕವೊಂದನ್ನು ಪ್ರದರ್ಶಿಸಿದ್ದರು. ಸಿಎಎ ಟೀಕಿಸಿ ಈ ನಾಟಕ ಬರೆಯಲಾಗಿತ್ತು.

ಜ.26ರಂದು ಈ ನಾಟಕದ ವಿಡಿಯೋ ವೈರಲ್ ಆಗಿತ್ತು. ಈ ವೇಳೆ ನೀಲೇಶ್ ರಾಖ್ಯಾಲ್ ಎಂಬುವವರು ಈ ಬಗ್ಗೆ ದೂರು ದಾಖಲು ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಿದ್ಯಾರ್ಥಿಯ ತಾಯಿಯನ್ನು ಬಂಧಿಸಲಾಗಿತ್ತು.
ಸಿಎಂ ಮನೆ ಮುಂದೆ 100 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಡಿಕೆ ಸುರೇಶ್, ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಹನುಮಂತಯ್ಯ, ಶಾಸಕಿ ಸೌಮ್ಯಾ ರೆಡ್ಡಿ ಪಾಲ್ಗೊಂಡಿದ್ದರು.












Click it and Unblock the Notifications