ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂ ಮನೆ ಮುತ್ತಿಗೆ ಯತ್ನ: ಕಾಂಗ್ರೆಸ್ ಮುಖಂಡರು ಪೊಲೀಸರ ವಶಕ್ಕೆ

|
Google Oneindia Kannada News

Recommended Video

BJP ಸರ್ಕಾರದ ವಿರುವುದ ಕಾಂಗ್ರೆಸ್ ಮುಖಂಡರ ಬೃಹತ್ ಪ್ರತಿಭಟನೆ

ಬೆಂಗಳೂರು, ಫೆಬ್ರವರಿ 15: ಬೀದರ್‌ನ ಶಾಹಿನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಗೃಹಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್​ ನಾಯಕ ದಿನೇಶ್​ ಗುಂಡೂರಾವ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಮೌರ್ಯ ವೃತ್ತದ ಗಾಂಧಿ ಪ್ರತಿಮೆಯಿಂದ ಮಧ್ಯಾಹ್ನ 11 ಗಂಟೆಗೆ ಪಾದಯಾತ್ರೆ ಆರಂಭಗೊಂಡಿತ್ತು.

ಬೀದರ್‌; ಶಾಹಿನ್ ಶಾಲೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಬೀದರ್‌; ಶಾಹಿನ್ ಶಾಲೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೇಂದ್ರ ಪೌರತ್ವ ಕಾಯ್ದೆಯನ್ನು ಟೀಕಿಸಿ ನಾಟಕ ಮಾಡಿದ್ದಕ್ಕೆ ಬೀದರ್​ನ ಶಾಲೆಯ ವಿರುದ್ಧ ದೇಶ ದ್ರೋಹದ ಪ್ರಕರಣ ದಾಖಲಾಗಿತ್ತು. ಬೀದರ್​ನ ಶಾಹೀನ್​ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳು ನಾಟಕವೊಂದನ್ನು ಪ್ರದರ್ಶಿಸಿದ್ದರು. ಸಿಎಎ ಟೀಕಿಸಿ ಈ ನಾಟಕ ಬರೆಯಲಾಗಿತ್ತು.

Congress Leaders Protest Infront Of CM Residence Detained

ಜ.26ರಂದು ಈ ನಾಟಕದ ವಿಡಿಯೋ ವೈರಲ್​ ಆಗಿತ್ತು. ಈ ವೇಳೆ ನೀಲೇಶ್​ ರಾಖ್ಯಾಲ್​ ಎಂಬುವವರು ಈ ಬಗ್ಗೆ ದೂರು ದಾಖಲು ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಿದ್ಯಾರ್ಥಿಯ ತಾಯಿಯನ್ನು ಬಂಧಿಸಲಾಗಿತ್ತು.

ಸಿಎಂ ಮನೆ ಮುಂದೆ 100 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಡಿಕೆ ಸುರೇಶ್, ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಕೆ ಹರಿಪ್ರಸಾದ್, ಹನುಮಂತಯ್ಯ, ಶಾಸಕಿ ಸೌಮ್ಯಾ ರೆಡ್ಡಿ ಪಾಲ್ಗೊಂಡಿದ್ದರು.

English summary
The Opposition Congress staged protests against the BJP government Today. Congress Leaders Detained During Protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X