ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಸಂತೋಷ್ ಪಾಟೀಲ್ ನಿವಾಸಕ್ಕೆ ಕಾಂಗ್ರೆಸ್‌ ನಾಯಕರ ಭೇಟಿ

|
Google Oneindia Kannada News

ಬೆಳಗಾವಿ, ಏಪ್ರಿಲ್ 13; ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಬೆಳಗಾವಿಯಲ್ಲಿರುವ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದರು.

ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮುಂತಾದವರು ಸಂತೋಷ್ ಪಾಟೀಲ್ ಮನೆಗೆ ಭೇಟಿ ಕೊಟ್ಟರು.

ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯ ಹೈಲೈಟ್ಸ್!ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯ ಹೈಲೈಟ್ಸ್!

ಬೆಳಗಾವಿಯ ಸಮರ್ಥ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿ, ಸಂತೋಷ್ ಕುಟುಂಬದವರಿಗೆ ಧೈರ್ಯ ತುಂಬಿದರು. ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ ನಿಮ್ಮ ನೋವಿನಲ್ಲಿ ಕಾಂಗ್ರೆಸ್ ಪಕ್ಷ ಭಾಗಿಯಾಗಿದೆ ಎಂದರು. ಯಾವುದೇ ರಾಜಕೀಯ ಮಾಡದೇ ನ್ಯಾಯ ಒದಗಿಸಿ ಕೊಡುವುದಾಗಿ ಭರವಸೆ ನೀಡಿದರು.

ಸರ್ಕಾರದ ವಿರುದ್ಧ ಜನ ಜಾಗೃತಿ; ರಾಜ್ಯ ಪ್ರವಾಸ ಹೊರಟ ಕಾಂಗ್ರೆಸ್! ಸರ್ಕಾರದ ವಿರುದ್ಧ ಜನ ಜಾಗೃತಿ; ರಾಜ್ಯ ಪ್ರವಾಸ ಹೊರಟ ಕಾಂಗ್ರೆಸ್!

Congress Leaders Visits Contractor Santhosh Patil House

ಬೆಳಗಾವಿಯ ಗುತ್ತಿಗೆದಾರರಾದ ಸಂತೋಷ್ ಪಾಟೀಲ್ ಮಂಗಳವಾರ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೆ ಮುನ್ನ ಕಳಿಸಿರುವ ವಾಟ್ಸಪ್ ಸಂದೇಶದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ನನ್ನ ಸಾವಿಗೆ ಕಾರಣ ಎಂದು ಬರೆದಿದ್ದರು.

 Breaking: ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ Breaking: ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಸಚಿವ ಈಶ್ವರಪ್ಪ ಸ್ಪಷ್ಟನೆ

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲು ತೀರ್ಮಾನಿಸಿದೆ. ಈಗಾಗಲೇ ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Congress Leaders Visits Contractor Santhosh Patil House

ಕಾಂಗ್ರೆಸ್ ನಾಯಕರ ನಿಯೋಗ ಬುಧವಾರ ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ಶೇ 40ರಷ್ಟು ಕಮಿಷನ್‌ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದೆ.

ಉಡುಪಿಯ ಲಾಡ್ಜ್‌ನಿಂದ ಸಂತೋಷ್ ಪಾಟೀಲ್ ಶವವನ್ನು ಬುಧವಾರ ಪಂಚನಾಮೆ ಬಳಿಕ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಶವ ಹಸ್ತಾಂತರ ಮಾಡಲಾಗುತ್ತದೆ.

ಈಶ್ವರಪ್ಪ ಪತ್ರಿಕಾಗೋಷ್ಠಿ; ಬುಧವಾರ ಮಧ್ಯಾಹ್ನ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೆ. ಎಸ್. ಈಶ್ವರಪ್ಪ, "ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಅಮೂಲಾಗ್ರ ತನಿಖೆ ನಡೆಸಬೇಕು. ಆದರೆ ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ" ಎಂದು ಹೇಳಿದರು.

"ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಡೆತ್ ನೋಟ್ ಹಿಡಿದುಕೊಂಡು ಬಿಜೆಪಿಯವರು ಪ್ರತಿಭಟನೆ ನಡೆಸಿದ್ದರು. ಗೃಹ ಸಚಿವರಾಗಿದ್ದ ಕೆ. ಜೆ. ಜಾರ್ಜ್ ಅವರ ರಾಜೀನಾಮೆ ಪಡೆದರು ಎಂದು ಕಾಂಗ್ರೆಸ್ ಪಕ್ಷ ಆರೋಪಿಸುತ್ತಿದೆ. ಗಣಪತಿ ಅವರು ಡೆತ್ ನೋಟ್ ಬರೆದಿಟ್ಟು ಸಹಿ ಹಾಕಿದ್ದರು. ಆದರೆ ಸಂತೋಷ್ ಪಾಟೀಲ್ ಪ್ರಕರಣ ಹಾಗಲ್ಲ" ಎಂದರು.

"ವಾಟ್ಸಪ್‌ನಲ್ಲಿ ಡೆತ್ ನೋಟ್ ಟೈಪ್ ಮಾಡಿದ್ದಾರೆ. ಆದರೆ ಅದನ್ನು ಟೈಪ್ ಮಾಡಿದ್ದು ಅವರೋ ಅಥವಾ ಬೇರೆಯವರೊ ಗೊತ್ತಿಲ್ಲ. ಅದು ತನಿಖೆಯಿಂದ ಹೊರಬರಬೇಕು. ಆದರೆ ಸಂತೋಷ್ ಪಾಟೀಲ್ ಅವರು ಡೆತ್ ನೋಟ್ ಬರೆದಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ರಾಜೀನಾಮೆ ಕೇಳುತ್ತಿದ್ದಾರೆ" ಎಂದು ಆರೋಪಿಸಿದರು.

"ನಮ್ಮ ಇಲಾಖೆಯಲ್ಲಿ ಯಾವುದೇ ಕಾಮಗಾರಿ ನಡೆಸುವಾಗ ಆಡಳಿತಾತ್ಮಕ ಮತ್ತು ತಾಂತ್ರಿಕವಾಗಿ ಒಪ್ಪಿಗೆ ಪಡೆಯಬೇಕು. ಆ ನಂತರ ವರ್ಕ್ ಆರ್ಡರ್ ಕೊಡಬೇಕು. ಸರ್ಕಾರಿ ಇಲಾಖೆ ಮೇಲ್ವಿಚಾರಣೆ ನಡೆಸಬೇಕು. ಆ ನಂತರ ಬಿಲ್ ಪಾವತಿ ಆಗಲಿದೆ. ಆದರೆ ಸಂತೋಷ್ ಪಾಟೀಲ್ ಅವರು ನಡೆಸಿದ್ದಾರೆ ಎನ್ನಲಾದ ಕಾಮಗಾರಿಗಳು ಕಾನೂನು ಬಾಹಿರವಾಗಿದೆ" ಎಂದರು.

"ಸಿದ್ದರಾಮಯ್ಯ ಮತ್ತು ಡಿ. ಕೆ. ಶಿವಕುಮಾರ್ ಅವರು ಸರ್ಕಾರ ನಡೆಸಿದ್ದಾರೆ. ಅವರು ಸರ್ಕಾರ ನಡೆಸುತ್ತಿದ್ದಾಗ ಹೀಗೆ ನಿಯಮ ಬಾಹಿರವಾಗಿ ಕಾಮಗಾರಿಗಳನ್ನು ನಡೆಸಿದ್ದಾರೆ ಎಂದು ಸ್ಪಷ್ಟಪಡಿಸಬೇಕು" ಎಂದು ಈಶ್ವರಪ್ಪ ಪ್ರಶ್ನಿಸಿದರು.

Recommended Video

Kohli ಔಟ್ ಆಗೋದಕ್ಕೆ ಮುಖ್ಯ ಕಾರಣ Dhoni | Oneindia Kannada

English summary
Karnataka Congress leaders delegation visited contractor Santhosh Patil house in Belagavi. Santhosh Patil committed suicide in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X