ಬಜೆಟ್ ಅಧಿವೇಶನ ನಡೆಯಲು ಬಿಡದ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, ಫೆಬ್ರವರಿ 08: ರಾಜ್ಯ ಬಜೆಟ್ ಅಧಿವೇಶನ ನಡೆಯಲು ಅಡ್ಡಿಪಡಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ರಾತ್ರಿ ಪಂಜಿನ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಪಂಜು ಹಿಡಿದು ರಾತ್ರಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಬಜೆಟ್ ಅಧಿವೇಶನ ಪ್ರಾರಂಭವಾಗಿ ಎರಡು ದಿನವಾಗಿದ್ದು, ಬಿಜೆಪಿ ಶಾಸಕ ಗದ್ದಲದಿಂದಾಗಿ ಎರಡೂ ದಿನದ ಕಲಾಪವೂ ಬಲಿಯಾಗಿದೆ. ಇದರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೂ ಬಿಜೆಪಿ ಶಾಸಕರು ಅಡ್ಡಿಪಡಿಸಿದ್ದರು. ಸದನದ ಬಾವಿಗಿಳಿದು ಪ್ರತಿಭಟಿಸಿದ್ದರು. ಎರಡನೇಯ ದಿನವೂ ಇದು ಮುಂದುವರೆದಿತ್ತು. ಹಾಗಾಗಿ ಸಭಾಧ್ಯಕ್ಷರು ಸದನವನ್ನು ಶುಕ್ರವಾರ ಮಧ್ಯಾಹ್ನ 12:30 ಕ್ಕೆ ಕಲಾಪವನ್ನು ಮುಂದೂಡಿದ್ದಾರೆ.
ಶುಕ್ರವಾರದಂದು ಬಜೆಟ್ ಮಂಡನೆ ಇದ್ದು, ಅದಕ್ಕೂ ಬಿಜೆಪಿ ಶಾಸಕರು ಅಡ್ಡಿ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ. ಸರ್ಕಾರ ಸುಸೂತ್ರವಾಗಿ ನಡೆಯುತ್ತಿಲ್ಲ ಎಂಬುದು ಬಿಜೆಪಿ ಶಾಸಕರ ಪ್ರತಿಭಟನೆಗೆ ಕಾರಣವಾಗಿದೆ.












Click it and Unblock the Notifications