ಲೋಕಾಯುಕ್ತ ವಿಚಾರಣೆ ಬಳಿಕ ಸಚಿವ ಜಮೀರ್ ಶಾಕಿಂಗ್ ಹೇಳಿಕೆ
ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಲೋಕಾಯುಕ್ತ ವಿಚಾರಣೆಗೆ ಇಂದು ಹಾಜರಾಗಿದ್ದಾರೆ. ಅಕ್ರಮ ಆಸ್ತಿ ಕೇಸ್ ಸಂಬಂಧ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಸಚಿವ ಜಮೀರ್ ಅವರಿಗೆ ನೋಟಿಸ್ ನೀಡಿದ್ದರು. ಅದರಂತೆ ಇಂದು ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ವಿಚಾರಣೆ ಮುಗಿಸಿದ ಬಳಿಕ ಸಚಿವ ಜಮೀರ್ ಅಹ್ಮದ್ ಖಾನ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮುನ್ನ ಅವರು ಅಕ್ರಮ ಆಸ್ತಿ ಕೇಸ್ ಹಿನ್ನೆಲೆ ಲೋಕಾಯುಕ್ತ ವಿಚಾರಣೆಗೆ ತರಾತುರಿಯಲ್ಲಿ ಬಂದು ಹಾಜರಾದರು. ಅಕ್ರಮ ಆಸ್ತಿ ಕೇಸ್ ವಿಚಾರದಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದರು. ಇಂದು ಮಧ್ಯಾಹ್ನ ಮೂರು ಗಂಟೆಗೆ ಬರುವಂತೆ ತಿಳಿಸಿದ್ರು. ಆದರೆ ಕಾರಣಾಂತರಗಳಿಂದ ತಡವಾಯಿತು ಎಂದು ಜಮೀರ್ ಹೇಳಿದ್ದಾರೆ.

ಈ ಕೇಸ್‌ನಲ್ಲಿ ಮೂರು ನೋಟಿಸ್ ಕೊಟ್ಟಿದ್ದರು. ಆದರೂ ವಿಚಾರಣೆಗೆ ಬರಲು ಸಾಧ್ಯವಾಗಿರಲಿಲ್ಲ. ಇಂದು ವಿಚಾರಣೆಯಲ್ಲಿ ಅವರು ಕೇಸ್ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದ್ರು. ಅದಕ್ಕೆಲ್ಲ ಉತ್ತರಿಸಿದ್ದೇನೆ. ಅದು ಏನು ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲು ಆಗುವುದಿಲ್ಲ ಎಂದು ಜಮೀರ್ ಪ್ರತಿಕ್ರಿಯಿಸಿದ್ದಾರೆ.
ಏನಿದು ಪ್ರಕರಣ?: ಈ ಹಿಂದೆ ಎಸಿಬಿಯಲ್ಲಿ ಸಚಿವ ಜಮೀರ್ ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಸಚಿವ ಜಮೀರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದ ಪರಿಶೀಲನೆ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲಿಸಿ ತನಿಖೆ ಶುರು ಮಾಡಿತ್ತು.

ಆದರೆ ಮತ್ತೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಎಸಿಬಿಯನ್ನು ರದ್ದು ಮಾಡಿತ್ತು. ಹೀಗಾಗಿ ಜಮೀರ್ ಕೇಸ್ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ಸದ್ಯ ಈ ಪ್ರಕರಣವನ್ನು ಲೋಕಾಯುಕ್ತ ಅವರೇ ತನಿಖೆ ನಡೆಸುತ್ತಿರುವುದರಿಂದ ಜಮೀರ್ ಅವರನ್ನು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿತ್ತು. ಈ ಹಿನ್ನೆಲೆ ಇಂದು ಸಚಿವ ಜಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.
ಡಿಸೆಂಬರ್ 3ರಂದು ಖುದ್ದು ವಿಚಾರಣೆಗೆ ಬರುವಂತೆ ಲೋಕಾಯುಕ್ತ ಡಿವೈಎಸ್‌ಪಿ ಸಚಿವ ಜಮೀರ್ ಅವರಿಗೆ ನೋಟಿಸ್ ನೀಡಿದ್ದರು. ಇಡಿ ದಾಳಿ ಬಳಿಕ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲಾಗಿ ಎರಡು ವರ್ಷಗಳಿಂದ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಈ ಹಿಂದೆ ಜಮೀರ್ ಅವರಿಗೆ ಕೇಸ್‌ಗೆ ಸಂಬಂಧಿಸಿದ ಕೆಲವು ದಾಖಲೆ ಸಲ್ಲಿಸಲು ಸಹ ನೋಟಿಸ್ ನೀಡಲಾಗಿತ್ತು. ಈಗ ಖುದ್ದಾಗಿ ವಿಚಾರಣೆಗೆ ಹಾಜರಾಗಿ, ತಮ್ಮ ಹೇಳಿಕೆ ದಾಖಲಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿತ್ತು.












Click it and Unblock the Notifications