ಪರಮೇಶ್ವರ್ ಮನೆಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
ಬೆಂಗಳೂರು, ಮೇ 30: ಅತ್ತ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ತಯಾರಿಯಲ್ಲಿದ್ದರೆ, ಇತ್ತ ರಾಜ್ಯದಲ್ಲಿ ರಾಜಕೀಯ ನಾಯಕರು ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಒದ್ದಾಟದಲ್ಲಿದ್ದಾರೆ.
ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಇಂದೂ ಸಭೆ ನಡೆಸಿದ್ದಾರೆ. ಇಂದು ಡಿಸಿಎಂ ಪರಮೇಶ್ವರ್ ಅವರ ನಿವಾಸದಲ್ಲಿ ಸಭೆ ನಡೆದಿದೆ.
ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಭಾಗವಹಿಸಿದ್ದು, ಕಾಂಗ್ರೆಸ್ ಸಚಿವರು ಮತ್ತು ಮುಖಂಡರು ಭಾಗವಹಿಸಿದ್ದರು.

ಸರ್ಕಾರ ಉಳಿಸಿಕೊಳ್ಳಲು ಅತೃಪ್ತರಿಗೆ ಸಚಿವ ಸ್ಥಾನದ ಆಫರ್ ನೀಡಲು ಕಾಂಗ್ರೆಸ್ ನಿಶ್ಚಯಿಸಿದ್ದು, ಅದರ ಬಗ್ಗೆಯೇ ಇಂದು ಚರ್ಚೆ ನಡೆದಿದೆ ಎನ್ನಲಾಗಿದೆ.
ಕೆಲವು ಸಚಿವರಿಗೆ ಕೋಕ್ ನೀಡುವ ಸಾಧ್ಯತೆ ಇದ್ದು, ಅತೃಪ್ತರಿಗೆ ಮಣೆ ಹಾಕಲಾಗುತ್ತಿದೆ. ಹಾಗಾಗಿಯೇ ಮುನ್ನಚ್ಚರಿಕಾ ಕ್ರಮವಾಗಿ ಇಂದು ಎಲ್ಲ ಸಚಿವರ ಬಳಿ ಕೆ.ಸಿ.ವೇಣುಗೋಪಾಲ್ ಅವರು ಮಾತುಕತೆ ನಡೆಸಿದ್ದಾರೆ.












Click it and Unblock the Notifications