ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪರಿಚಯ

|
Google Oneindia Kannada News

ಬೆಂಗಳೂರು, ಆಗಸ್ಟ್ 11 : ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆಯೂ ಹೈಡ್ರಾಮ ನಡೆಯುತ್ತಿದೆ.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಶಾಸಕರ ಮನೆ ಮೇಲೆ ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆಸಲಾಯಿತು.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ

ಈ ಸಂದರ್ಭದಲ್ಲಿ ಡಿ. ಜೆ. ಹಳ್ಳಿ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಲು ಸ್ಥಳಕ್ಕೆ ಆಗಮಿಸಿದರು. ಆಗ
ಉದ್ರಿಕ್ತ ಜನರು ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ಮುಂದೆ ಬಂದು ಗಲಾಟೆ ಆರಂಭಿಸಿದರು. ಪೊಲೀಸ್ ವಾಹನಗಳನ್ನು ಜಖಂಗೊಳಿಸಿದರು.

ಡಿ. ಜೆ. ಹಳ್ಳಿ ಪೊಲೀಸ್ ಠಾಣೆ ಉದ್ವಿಗ್ನ, ವಾಹನಗಳು ಜಖಂ ಡಿ. ಜೆ. ಹಳ್ಳಿ ಪೊಲೀಸ್ ಠಾಣೆ ಉದ್ವಿಗ್ನ, ವಾಹನಗಳು ಜಖಂ

Congress MLA Akhanda Srinivas Murthy Profile

ಕಾವಲ್ ಭೈರಸಂದ್ರ ಪ್ರದೇಶದಲ್ಲಿ ವಾಹನಗಳನ್ನು ಜಖಂಗೊಳಿಸಲಾಗಿದೆ. ಕಂಡ ಕಂಡಲ್ಲಿ ಬೆಂಕಿ ಹಚ್ಚಲಾಗಿದೆ. ಕಟ್ಟಡಗಳ ಮೇಲೆ ನಿಂತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗುತ್ತಿದೆ.

ಅಖಂಡ ಶ್ರೀನಿವಾಸಮೂರ್ತಿ ಪರಿಚಯ

* ಜೆಡಿಎಸ್‌ನಿಂದ ಅಮಾನತುಗೊಂಡು ಕಾಂಗ್ರೆಸ್ ಸೇರಿದ ಶಾಸಕರಲ್ಲಿ ಅಖಂಡ ಶ್ರೀನಿವಾಸಮೂರ್ತಿ ಸಹ ಒಬ್ಬರು. 2019ರ ಚುನಾವಣೆಯಲ್ಲಿ ಅವರು 97,574 ಮತಗಳನ್ನು ಪಡೆದು 81,626 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಡಿ. ಜೆ.ಹಳ್ಳಿ ಗಲಭೆ: ಗೃಹ ಸಚಿವರ ಎಚ್ಚರಿಕೆಡಿ. ಜೆ.ಹಳ್ಳಿ ಗಲಭೆ: ಗೃಹ ಸಚಿವರ ಎಚ್ಚರಿಕೆ

* 2016ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಏಳು ಶಾಸಕರಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು ಒಬ್ಬರಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಬಂದಿದ್ದಾರೆ.

* 2018ರ ಚುನಾವಣೆಯಲ್ಲಿ ಪುಲಿಕೇಶಿ ನಗರ ಕ್ಷೇತ್ರದಲ್ಲಿ ಜೆಡಿಎಸ್‌ನ ಬಿ. ಪ್ರಸನ್ನ ಕುಮಾರ್ ವಿರುದ್ಧ ಜಯಗಳಿಸಿದ್ದಾರೆ. ಪ್ರಸನ್ನ ಕುಮಾರ್ ಪಡೆದ ಮತಗಳು ಕೇವಲ 15,948.

* 2013ರ ಚುನಾವಣೆಯಲ್ಲಿ ಪುಲಿಕೇಶಿ ನಗರದಲ್ಲಿ ಅಖಂಡ ಶ್ರೀನಿವಾಸಮೂರ್ತಿ (ಜೆಡಿಎಸ್) ವಿರುದ್ಧ ಬಿ. ಪ್ರಸನ್ನ ಕುಮಾರ್ ಸೋತಿದ್ದರು. 2018ರ ಚುನಾವಣೆ ವೇಳೆಗೆ ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಸೇರಿದರು.

* 2013ರ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಜೆಡಿಎಸ್‌ನಿಂದ ಕಣಕ್ಕಿಳಿದು 48,955 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 2018ರಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದಾರೆ.

English summary
Stone pelting at Pulakeshinagar constituency Congress MLAAkhanda Srinivas Murthy house. Here are the profile of Akhanda Srinivas Murthy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X