ಮಾಜಿ ಸಚಿವ ದಿನೇಶ್ ಗುಂಡೂರಾವ್‌ಗೆ ಕೋವಿಡ್ ಸೋಂಕು
ಬೆಂಗಳೂರು, ಸೆಪ್ಟೆಂಬರ್ 27: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ಗೆ ಕೋವಿಡ್ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 5,66,023ಕ್ಕೆ ಏರಿಕೆಯಾಗಿದೆ.
ಭಾನುವಾರ ಕೆಪಿಸಿಸಿಯ ಮಾಜಿ ಅಧ್ಯಕ್ಷ, ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. "ಕೋವಿಡ್ ಟೆಸ್ಟ್‌ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ" ಎಂದು ಹೇಳಿದ್ದಾರೆ.

"ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ" ಎಂದು ಅವರು ಮನವಿ ಮಾಡಿದ್ದಾರೆ.

ಉಸ್ತುವಾರಿಯಾಗಿ ನೇಮಕ: ದಿನೇಶ್ ಗುಂಡೂರಾವ್ ಅವರು ತಮಿಳುನಾಡು, ಪುದುಚೇರಿ ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.
ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 27, 2020
ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ.
ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ವಿನಂತಿಸುತ್ತೇನೆ.
ಸೆಪ್ಟೆಂಬರ್ 25ರಂದು ಅವರು ಚೆನ್ನೈಗೆ ಭೇಟಿ ನೀಡಿ ಕಾಂಗ್ರೆಸ್ ಹಿರಿಯ ನಾಯಕ ರಾಜ್ಯಸಭಾ ಸದಸ್ಯ ಪಿ. ಚಿದಂಬರಂ, ಲೋಕಸಭಾ ಸದಸ್ಯ ಕಾರ್ತಿಕ್ ಚಿದಂಬರಂ ಭೇಟಿ ಮಾಡಿದ್ದರು. ಡಿಎಂಕೆ ಮುಖ್ಯಸ್ಥ ಎಂ. ಕೆ. ಸ್ಟಾಲಿನ್ ಭೇಟಿ ಮಾಡಿದ್ದರು.
ದಿನೇಶ್ ಗುಂಡೂರಾವ್ ಶನಿವಾರದ ತನಕ ವಿಧಾನಸಭೆ ಅಧಿವೇಶದಲ್ಲಿ ಪಾಲ್ಗೊಂಡಿದ್ದರು. ಈಗ ಅವರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಅವರ ಸಂಪರ್ಕಕ್ಕೆ ಬಂದ ನಾಯಕರಿಗೆ ಆತಂಕ ಎದುರಾಗಿದೆ.












Click it and Unblock the Notifications