Ramesh Kumar Wife Passes Away : ಕಾಂಗ್ರೆಸ್‌ ನಾಯಕ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ನಿಧನ

ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಧರ್ಮಪತ್ನಿ ವಿಜಯಮ್ಮನವರು ಶುಕ್ರವಾರ ವಿಧಿವಶರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.

ಬೆಂಗಳೂರು, ಫೆಬ್ರವರಿ 17: ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಧರ್ಮಪತ್ನಿ ವಿಜಯಮ್ಮನವರು ಶುಕ್ರವಾರ ವಿಧಿವಶರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಕಳೆದ ಎರಡು ತಿಂಗಳಿಂದ ವಿಜಯಮ್ಮನವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ತೀವ್ರ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ನೀಡಲಾಗಿದ್ದ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಅವರು ಪತಿ, ಮಕ್ಕಳು ಹಾಗೂ ಮೊಮ್ಮಕ್ಕಳನ್ನು ತೊರೆದಿದ್ದಾರೆ.

ವಿಜಯಮ್ಮನವರ ಪಾರ್ಥಿವ ಶರೀರವನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ. ಆದರೆ, ಅವರ ಅಂತ್ಯಸಂಸ್ಕಾರ ಎಲ್ಲಿ, ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Congress MLA KR Ramesh Kumars wife Vijayamma Passed away; Siddaramaiah condoled

ವಿಜಯಮ್ಮ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ರಮೇಶ್‌ ಕುಮಾರ್‌ ಅವರ ಪತ್ನಿ ವಿಜಯಮ್ಮನವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ತಿಳಿಸಿದ್ದಾರೆ.

Congress MLA KR Ramesh Kumars wife Vijayamma Passed away; Siddaramaiah condoled

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ
'ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕರು ಹಾಗೂ ಮಾಜಿ ವಿಧಾನಸಭಾಧ್ಯಕ್ಷರಾದ ಶ್ರೀ ರಮೇಶ್ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮನವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ರಮೇಶ್ ಕುಮಾರ್ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನಿಡಲಿಯೆಂದು ಪ್ರಾರ್ಥಿಸುತ್ತೇನೆ‌. ಓಂ ಶಾಂತಿ'
ಎಂದು ಬಸವರಾಜ ಬೊಮ್ಮಾಯಿ ಸಂತಾಪ

ರಮೇಶ್ ಕುಮಾರ್ ಅವರು 25 ಮೇ 2018 ರಿಂದ 29 ಜುಲೈ 2019 ರ ವರೆಗೆ ಕರ್ನಾಟಕ ವಿಧಾನಸಭೆಯ 16 ನೇ ಸ್ಪೀಕರ್ ಆಗಿದ್ದರು. ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಯ ಆರು ಅವಧಿಯ ಸದಸ್ಯರಾಗಿದ್ದಾರೆ. ಜೂನ್ 2016 ರಲ್ಲಿ, ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡರು. ರಮೇಶ್ ಕುಮಾರ್ ಅವರು ಕರ್ನಾಟಕ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಖಾತೆಯನ್ನು ಹೊಂದಿದ್ದರು. ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ 15 ನೇ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದರು.

2018 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಮತ್ತೆ ಶಾಸಕರಾಗಿ ಆಯ್ಕೆಯಾದರು. ಜೆಡಿಎಸ್‌ನ ವೆಂಕಟ ಶಿವ ರೆಡ್ಡಿ ಅವರನ್ನು 10,373 ಮತಗಳಿಂದ ಸೋಲಿಸಿದರು. ಇದು ಸತತ ಒಂಬತ್ತನೇ ಬಾರಿಗೆ ರಮೇಶ್ ಕುಮಾರ್ ಮತ್ತು ಜಿ ಕೆ ವೆಂಕಟ ಶಿವ ರೆಡ್ಡಿ ಅವರು ಪರಸ್ಪರ ವಿರುದ್ಧವಾಗಿ ಸ್ಪರ್ಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+