ಸ್ಪೀಕರ್ ಚುನಾವಣೆ: ಸುರೇಶ್ ಕುಮಾರ್ ಎದುರಾಗಿ ಕಾಂಗ್ರೆಸ್‌ನ ರಮೇಶ್ ಕುಮಾರ್
ಬೆಂಗಳೂರು, ಮೇ 24: ಕರ್ನಾಟಕ ವಿಧಾನಸಭೆ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಒಕ್ಕೂರಲ ಅಭ್ಯರ್ಥಿಯಾಗಿ ಶ್ರೀನಿವಾಸಪುರದ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಹಲವು ಕಾಂಗ್ರೆಸ್ ಮುಖಂಡರ ಜೊತೆ ರಮೇಶ್ ಕುಮಾರ್ ಅವರು ವಿಧಾನಸಭೆ ಮುಖ್ಯ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್ ಕುಮಾರ್ ಅವರು ಇಂದು ಬೆಳಿಗ್ಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಮಧ್ಯಾಹ್ನ 12:30ಕ್ಕೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಶಾಸಕರ ಬಲ ಹೆಚ್ಚಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಅಭ್ಯರ್ಥಿ ರಮೇಶ್ ಕುಮಾರ್ ಅವರಿಗೆ ಗೆಲುವಾಗುವ ಸಾಧ್ಯತೆ ಇದೆ.

ರಮೇಶ್ ಕುಮಾರ್ ಅವರು ಈ ಹಿಂದೆಯೂ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದು, ನಿಷ್ಪಕ್ಷಪಾತವಾಗಿ ಸ್ಪೀಕರ್ ಸ್ಥಾನ ನಿರ್ವಹಿಸಿದ ಕೆಲವರಲ್ಲಿ ಒಬ್ಬರು ಎಂಬ ಖ್ಯಾತಿ ಅವರಿಗಿದೆ.












Click it and Unblock the Notifications