ಸಿಎಲ್‌ಪಿ ನಾಯಕ ಸಿದ್ದರಾಮಯ್ಯಗೆ ಉಮೇಶ್ ಜಾಧವ್ ಪತ್ರ
ಬೆಂಗಳೂರು, ಫೆಬ್ರವರಿ 8: ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಪತ್ರ ಬರೆದಿದ್ದಾರೆ.
ವೈಯಕ್ತಿಕ ಕಾರಣಗಳಿಂದಾಗಿ ಸಿಎಲ್‌ಪಿ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ, ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ, ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ ಎಂದು ಎಂದು ಕಾಂಗ್ರೆಸ್ ಅತೃಪ್ತ ಶಾಸಕ ಉಮೇಶ್ ಜಾಧವ್ ಪತ್ರ ಬರೆದಿದ್ದಾರೆ. ಡಾ. ಉಮೇಶ್ ಜಾಧವ್ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ಕಾಂಗ್ರೆಸ್ ಅತೃಪ್ತ ಶಾಸಕರನ್ನು ತಹಬದಿಗೆ ತರಲು ನಿರ್ಣಯಿಸಿರುವ ರಾಜ್ಯ ಕಾಂಗ್ರೆಸ್ ಅತೃಪ್ತ ಶಾಸಕ ಉಮೇಶ್ ಜಾಧವ್ ಅವರ ನಿಗಮ ಅಧ್ಯಕ್ಷ ಸ್ಥಾನವನ್ನು ರದ್ದು ಮಾಡಿಸಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನೀಡಿರುವ ಆದೇಶದಂತೆ, ಉಮೇಶ್ ಜಾಧವ್ ಅವರ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನವನ್ನು ರದ್ದು ಮಾಡಲಾಗಿದೆ.












Click it and Unblock the Notifications