ಪೆಟ್ರೋಲ್ ತೆರಿಗೆ ಹೆಚ್ಚಳ: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾರಿ ವಿರೋಧ
ಬೆಂಗಳೂರು ಜು.11: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡಲು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸುವ ನಿರ್ಧಾರಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.
ಶಾಂಸಕಾಂಗ ಪಕ್ಷದ ನಾಯ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಗ್ಗೆ ವಿಧಾನ ಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಶಾಂಸಕಾಂಗ ಪಕ್ಷದ ಸಭೆಯಲ್ಲಿ ಹಲವಾರು ಶಾಸಕರು ನಿರ್ಧಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆಯನ್ನು ಹೆಚ್ಚಳ ಮಾಡಿದ್ದರಿಂದ ನಾವು ಕ್ಷೇತ್ರದಲ್ಲಿ ಓಡಾಡುವುದೇ ತೊಂದರೆಯಾಗಿದೆ.
ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳದಿಂದ ಜನರು ಇದೀಗ ಸರಾಸರಿ 1 ರೂ. ಹೆಚ್ಚಳದ ಹಿನ್ನೆಲೆಯಲ್ಲಿ ಆಕ್ರೋಶ ಕಾಂಗ್ರೆಸ್ ಪಕ್ಷದ ಕಡೆಗೆ ತಿರುಗಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಒಂದು ವೇಳೆ ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಡೀಸೆಲ್, ಪೆಟ್ರೋಲ್ ತೆರಿಗೆ ಹೆಚ್ಚಳ ವಾಪಸ್ ಪಡೆಯದಿದ್ದರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗಿರುವುದನ್ನು ಹಿರಿಯ ಮುಖಂಡ, ಮಾಜಿ ಸಚಿವ ಎಚ್‌ಕೆ ಪಾಟೀಲ್ ಖಚಿತಪಡಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೇರಿರುವ ಹೆಚ್ಚುವರಿ ಸುಂಕದ ಕುರಿತಂತೆ ಸಭೆಯಲ್ಲಿ ಚರ್ಚೆಯಾಗಿದೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ, ಅಲ್ಲದೆ ಉತ್ತರ ಕರ್ನಾಟಕಕಕ್ಕೆ ಆಗಿರುವ ಅನ್ಯಾಯ, ಅಲ್ಪಸಂಖ್ಯಾತರ ಮೇಲೆ ತೋರಿರುವ ನಿರ್ಲಕ್ಷ್ಯ, ಸಾಲಮನ್ನಾ ವಿಚಾರದಲ್ಲಿ ಆಗುತ್ತಿರುವ ಪ್ರಾದೇಶಿಕ ತಾರತಮ್ಯವನ್ನು ಸರಿಪಿಡುವ ಕುರಿತಂತೆ ತಾವು, ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಬರೆದಿರುವ ಪತ್ರ ಕುರಿತು ವ್ಯಾಪಕ ಚರ್ಚೆಯಾಯಿತು.
ನನ್ನ ಅಭಿಪ್ರಾಯಕ್ಕೆ ಹಲವಾರು ಶಾಸಕರು ಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಮತ್ತು ಶಾಸಕರು ನನ್ನ ಮೂರು ಪ್ರಶ್ನೆಗಳಿಗೆ ಸಹಮತ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಈ ಮೂರೂ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುವುದಾಗಿ ಪರಮೇಶ್ವರ್ ತಿಳಿಸಿದ್ದಾರೆ ಎಂದು ಎಚ್‌ಕೆ ಪಾಟೀಲ್ ತಿಳಿಸಿದ್ದಾರೆ.












Click it and Unblock the Notifications