DK Suresh Nomination: ಕಾಂಗ್ರೆಸ್ ಟ್ವಿಸ್ಟ್: ಡಿಕೆ ಸುರೇಶ್ ನಾಮಪತ್ರ ಸಲ್ಲಿಸಲು ರೆಡಿ, ಆದರೆ ಕ್ಷೇತ್ರ ಯಾವುದು?
ರಾಮನಗರ, ಏಪ್ರಿಲ್ 20: ರಾಜ್ಯ ಚುನಾವಣೆ ಕಾವು ಹೆಚ್ಚಾಗಿದ್ದು, ರಣಕಣದಲ್ಲಿ ಕಾಂಗ್ರೆಸ್‌ನಿಂದ ಮಹತ್ತರ ಸುಳಿವು ದೊರೆತಿದೆ.
ಕಾಂಗ್ರೆಸ್‌ನಿಂದ ಸಂಸದ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಲು ಬೆಂಗಳೂರಿನತ್ತ ಬರುತ್ತಿದ್ದಾರೆ. ಈ ಬಗ್ಗೆ ಕಾದು ನೋಡಿ ಎಂದು ಹೇಳಿ ಡಿಕೆ ಸುರೇಶ್ ಕುತೂಹಲ ಮೂಡಿಸಿದ್ದಾರೆ. ಡಿಕೆ ಸುರೇಶ್ ಅವರು ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ತಾವು ಯಾವ ಕ್ಷೇತ್ರದಿಂದ ಸ್ಫರ್ಧಿಸುತ್ತಾರೆ ಎಂಬ ಮಾಹಿತಿ ನೀಡಿಲ್ಲ. ಅವರು ಪದ್ಮನಾಭನಗರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷವಾಗಲಿ, ಸಂಸದರಾಗಲಿ ಈ ಬಗ್ಗೆ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಈ ಮೂಲಕ ಬಿಜೆಪಿಗೆ ದೊಡ್ಡ ಹೊಡೆತ ನೀಡಲು ಅವರ ಸಜ್ಜಾಗಿದ್ದಾರೆ.
ನಾವು ಪಕ್ಷ ಸಿದ್ಧಾಂತವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವವರು. ಯಾರ ಟೀಕೆಗಳಿಗೂ ತಲೆಕೆಡಿಸಿಕೊಳ್ಳುವವರಲ್ಲ ಎಂದು ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ನಾಮಪತ್ರ ಸಲ್ಲಿಕೆಗೆ ನಾವು ಎಲ್ಲ ರೀತಿಯಲ್ಲೂ ಸಿದ್ಧರಾಗಿದ್ದೇವೆ. ಮಧ್ಯಾಹ್ನ 2 ಗಂಟೆವರೆಗೂ ಕಾದು ನೋಡಿ ಎಂದ ಅವರು, ಯಾವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂಬುದನ್ನು ಬಹಿರಂಗಪಡಿಸಲಿಲ್ಲ.
ಬಿಜೆಪಿಯು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಹಣಿಯಲೆಂದೆ ಅವರ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಈಗಾಗಲೇ ಅವರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಇವರಿಬ್ಬರು ಒಕ್ಕಲಿಗ ಸಮುದಾಯ ನಾಯಕರೇ ಆಗಿದ್ದಾರೆ. ಹೀಗಾಗಿ ಕನಕಪುರದ ಚುನಾವಣೆ ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆ ಹುಟ್ಟು ಹಾಕಿದೆ.

ಬಿಜೆಪಿಗೆ ತಕ್ಕ ಉತ್ತರ ಕೊಡಲು ಕಾಂಗ್ರೆಸ್ ಸಜ್ಜು
ಇದಕ್ಕೆ ಪ್ರತಿಯಾಗಿ ಬಿಜೆಪಿಗೆ ತಕ್ಕ ಉತ್ತರ ನೀಡುವ ಕಾಂಗ್ರೆಸ್ ಸಜ್ಜಾಗಿದೆ. ಅದಕ್ಕಾಗೇ ಕಾಂಗ್ರೆಸ್ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಅವರು ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರದವರೆಗೂ ಅವರು ಆರ್.ಅಶೋಕ್ ಅವರ ಕ್ಷೇತ್ರವಾದ ಬೆಂಗಳೂರಿನ ಪದ್ಮನಾಭನಗರದಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗಿತ್ತು.
ಆದರೆ ಈ ಕುರಿತು ಪ್ರತಿಕ್ರಿಯಿಸಿದ ಅವರು ರಾಮನಗರದಿಂದ ಬೆಂಗಳೂರಿಗೆ ನಾಮಪತ್ರ ಸಲ್ಲಿಸಲೆಂದೇ ಬರುತ್ತಿರುವುದಾಗಿ ಹೇಳಿದರು. ಯಾವ ಕ್ಷೇತ್ರ ಎಂದು ಹೇಳಿಲ್ಲ. ಒಂದು ವೇಳೆ ಕೆಪಿಸಿಸಿ ಅಧ್ಯಕ್ಷರೇ ಆರ್ ಅಶೋಕ್ ಅವರಂತೆ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ. ಯಾಕೆಂದರೆ ರಾಜಕೀಯದಲ್ಲಿ ಕೊನೆಯ ಕ್ಷಣದಲ್ಲಿ ಯಾವೆಲ್ಲ ಬದಲಾವಣೆಗಳು ಆಗುತ್ತವೇ ಎಂದು ಊಹಿಸಲು ಸಾಧ್ಯವಾಗುವುದಿಲ್ಲ. ಸದ್ಯ ಈ ಎಲ್ಲ ಗೊಂದಲಗಳಿಗೆ ಇಂದು ಮಧ್ಯಾಹ್ನ 2ಗಂಟೆ ನಂತರವೇ ಉತ್ತರ ಸಿಗಲಿದೆ.












Click it and Unblock the Notifications