ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲ ಮನ್ನಾ ಮಾಡಲು ಕಾಂಗ್ರೆಸ್‌ ವಿರೋಧವಿಲ್ಲ: ಪರಮೇಶ್ವರ್‌

By Manjunatha
|
Google Oneindia Kannada News

Recommended Video

ರೈತರ ಸಾಲ ಮನ್ನಾ ಬಗ್ಗೆ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಹೇಳಿದ್ದೇನು? | Oneindia Kannada

ಬೆಂಗಳೂರು, ಮೇ 30: ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಪಕ್ಷದ ವಿರೋಧವಿಲ್ಲ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಸಾಲಮನ್ನಾ ಕುರಿತ ಪ್ರಮುಖ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರೈತರ ಸಾಲಮನ್ನಾ : 2 ಸೂತ್ರ ಮುಂದಿಟ್ಟ ಎಚ್.ಡಿ.ಕುಮಾರಸ್ವಾಮಿರೈತರ ಸಾಲಮನ್ನಾ : 2 ಸೂತ್ರ ಮುಂದಿಟ್ಟ ಎಚ್.ಡಿ.ಕುಮಾರಸ್ವಾಮಿ

ಜೆಡಿಎಸ್‌ಗೆ ಬಹುಮತ ಬಂದಿದ್ದರೆ ಕುಮಾರಸ್ವಾಮಿ ಈ ಹೊತ್ತಿಗೆ ಸಾಲಮನ್ನಾ ಮಾಡಿರುತ್ತಿದ್ದರು, ಆದರೆ ಸಮ್ಮಿಶ್ರ ಸರ್ಕಾರವಾದ್ದರಿಂದ ಚರ್ಚಿಸಿಯೇ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

Congress not against farmer loan wavier: Parameshwar

ರೈತರೊಂದಿಗಿನ ಸಭೆಯಲ್ಲೂ ಈ ವಿಷಯ ಮಾತನಾಡಿದ ಪರಮೇಶ್ವರ್ ಅವರು, ಮನೆ, ವಾಹನಕ್ಕೆ ಮಾಡಿದ ಸಾಲಗಳನ್ನು ಮನ್ನಾ ಮಾಡುವುದು ಹೇಗೆ. 500 ಎಕರೆ ಜಮೀನು ಹೊಂದಿರುವ ರೈತನದ್ದೂ ಸಾಲ ಮನ್ನಾ ಮಾಡು ಅಂದ್ರೆ ಹೇಗೆ? ಎಂದು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಅವರು ಮಾಡಿದರು.

ಮನಮೋಹನ್ ಸಿಂಗ್ ಅವರು ಸಾಲಮನ್ನಾ ಮಾಡಿದ್ದರು. ಈ ಬಾರಿ ನಾವು ಕೇಂದ್ರಕ್ಕೆ ನಿಯೋಗ ಕೊಂಡೊಯ್ದು ಸಾಲಮನ್ನಾ ಮಾಡಲು ಕೇಳಿದ್ದೆವು ಆದರೆ ಕೇಂದ್ರ ಒಪ್ಪಲಿಲ್ಲ ಎಂದು ಅವರು ಹೇಳಿದರು.

ಸಾಲಮನ್ನಾ ಮಾಡಲು ಕಾಂಗ್ರೆಸ್‌ನಿಂದ ಯಾವುದೇ ವಿರೋಧ ಇಲ್ಲ, ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಮಿತಿಗಳಿರುತ್ತವೆ, ಎಲ್ಲವನ್ನೂ ಚರ್ಚಿಸಿಯೇ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲೆಂದು ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.

English summary
Deputy CM G Parameshwar said congress not against farmer loan wavier. But in alliance government should decision should take after the discussion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X