ಕಾಂಗ್ರೆಸ್‌ನ ಅತಿ ಕಿರಿಯ ಅಭ್ಯರ್ಥಿ ಮಂಜುನಾಥ ಗೌಡ ನಾಮಪತ್ರ
ಬೆಂಗಳೂರು, ಏಪ್ರಿಲ್ 21: ಕಾಂಗ್ರೆಸ್‌ನ ಅತಿ ಕಿರಿಯ ಅಭ್ಯರ್ಥಿ ಮಂಜುನಾಥ ಗೌಡ ಅವರು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಾಮಪತ್ರ ಸಲ್ಲಿಸಿದರು.
27 ವರ್ಷ ವಯಸ್ಸಿನ ಮಂಜುನಾಥ ಗೌಡ ಅವರಿಗೆ ಕಾಂಗ್ರೆಸ್ ಈ ಬಾರಿ ಟಿಕೆಟ್ ನೀಡಿದೆ. ಮಂಜುನಾಥ್ ಮಾತನಾಡಿ, ಯುವಕರು ರಾಹುಲ್ ಗಾಂಧಿ ಬೆಂಬಲ ನೀಡುತ್ತಿದ್ದಾರೆ ಎನ್ನುವುದಕ್ಕೆ ನಾನೇ ಉದಾಹರಣೆ, ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಜನರು ನನ್ನ ಪರವಾಗಿದ್ದಾರೆ ಎಂದರು.
ಮಹಾಲಕ್ಷ್ಮೀ ಲೇಔಟ್ ನಲ್ಲಿ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅವರ ಪರವಾಗಿ ನಾನು ಹೋರಾಟ ಮಾಡುತ್ತೇನೆ. ಅವರ ಜತೆಗೆ ಹಿರಿಯರೂ ನನ್ನ ಜತೆಗೆ ಕೈ ಜೋಡಿಸಿದ್ದಾರೆ. ಅವರ ಬೆಂಬಲವೇ ನನಗೆ ಶ್ರೀರಕ್ಷೆ ಅಲ್ಲದೆ ನಮ್ಮ ಸರ್ಕಾಋ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಾನು ಯಾರಿಗೂ ಅಂಜುವುದಿಲ್ಲ, ಈ ಬಾರಿ ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಬಾವುಟವನ್ನು ಈ ಕ್ಷೇತ್ರದಲ್ಲಿ ಹಾರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 23 ಕೊನೆಯ ದಿನವಾಗಿದೆ. ಮೇ 12ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಬರಲಿದೆ.












Click it and Unblock the Notifications