ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು, ಮಾರ್ಚ್ 29: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಬ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಹಿಂದೊಮ್ಮೆ ತೇಜಸ್ವಿ ಸೂರ್ಯ ಅವರು, "ನೀವು ಮೋದಿಯನ್ನು ಬೆಂಬಲಿಸದಿದ್ದರೆ, ನೀವು ಭಾರತ ವಿರೋಧಿ ಎಂದರ್ಥ" ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಮತ್ತೆ ನೆನಪಿಸಿರುವ ಕಾಂಗ್ರೆಸ್, ಈ ಹೇಳಿಕೆಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಅಭ್ಯರ್ಥಿಯಾಗುವ ಮೊದಲೇ ನೀಡಿದ ಈ ಹೇಳಿಕೆ ಎಷ್ಟರ ಮಟ್ಟಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸಲಿದೆ.

Congress party files complaint with EC against Tejasvi Surya

ಕೇಂದ್ರದ ಮಾಜಿ ಸಚಿವ ದಿ.ಅನಂತ್ ಕುಮಾರ್ ಅವರ ನಿಧನದ ನಂತರ ತೆರವಾಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅನಂತ್ ಕುಮಾರ್ ಅವರ ಪತ್ನಿ, ತೇಜಸ್ವಿನಿ ಅನಂತ್ ಕುಮಾರ್ ಅವರೇ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಮುಖಂಡರು ತೆಗೆದುಕೊಂಡ ಅನಿರೀಕ್ಷಿತ ನಿರ್ಧಾರದಲ್ಲಿ 28 ವರ್ಷ ವಯಸ್ಸಿನ ವಕೀಲ, ತೇಜಸ್ವಿ ಸೂರ್ಯ ಅವರನ್ನು ತನ್ನ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+