ಸೆಪ್ಟೆಂಬರ್ 10ಕ್ಕೆ ಹೆಬ್ಬಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಬೆಂಗಳೂರು, ಸೆಪ್ಟೆಂಬರ್ 9: ಇಲ್ಲಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಇದೇ ಸೆಪ್ಟೆಂಬರ್ 10ನೇ ತಾರೀಕು, ಭಾನುವಾರದಂದು ಆಯೋಜಿಸಲಾಗಿದೆ. ಸುಲ್ತಾನ್ ಪಾಳ್ಯ ಮುಖ್ಯರಸ್ತೆಯ ನಾಗೇನಹಳ್ಳಿ ಹದಿಮೂರನೇ ಕ್ರಾಸ್ ನ ಪೌಲ್ ಹೆರ್ಮಿಟ್ ಚರ್ಚ್ ಪಕ್ಕದಲ್ಲಿ ಕಾರ್ಯಕ್ರಮ ನಡೆಯಲಿದೆ.
ಇದೇ ವೇಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಭೈರತಿ ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದು, ವಿವಿಧ ರಾಜಕೀಯ ಪಕ್ಷಗಳಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿರುವ ಮುಖಂಡರನ್ನು ಬರಮಾಡಿಕೊಳ್ಳಲಿದ್ದಾರೆ.

ಇನ್ನೇನು ಕೆಲ ತಿಂಗಳಲ್ಲೇ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಕಾರ್ಯಕ್ರಮಗಳು ವಿವಿಧೆಡೆ ನಡೆಯುತ್ತಿದೆ. ಅಂಥದ್ದೇ ಕಾರ್ಯಕ್ರಮವಾಗಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಭಾನುವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಭಾವಿಸಬಹುದಾಗಿದೆ.












Click it and Unblock the Notifications