BJP Protest: ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ!
ಬೆಂಗಳೂರು ಫೆಬ್ರವರಿ 7: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಇಂದು ದೆಹಲಿಯ ಜಂತರ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಯನ್ನು ಇಂದು ನಡೆಸಲಿದೆ.
ವಿಧಾನಸೌಧದ ಎದುರು ರಾಜ್ಯದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ರಾಜ್ಯದ 223 ತಾಲ್ಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿಲ್ಲ. 2000 ರೂಪಾಯಿ ರೈತರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈ ಹಣ ಇನ್ನೂ ತಲುಪಿಲ್ಲ. ಸರ್ಕಾರ ಪರಿಹಾರವನ್ನು ನೀಡುವ ಬದಲಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಬಿಜೆಪಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಮೂಲಕ ಒಂದೇ ದಿನ ಎರಡು ಪಕ್ಷಗಳು ದೆಹಲಿ ಹಾಗೂ ರಾಜ್ಯದಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಏಟಿಗೆ ಎದಿರೇಟು ನೀಡಲು ಸಜ್ಜಾಗಿವೆ.
ಇಂದು ಬೆಳಿಗ್ಗೆ (ಫೆಬ್ರವರಿ 7) 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟಿಸಲು ಸಜ್ಜಾಗಿದೆ. ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಕನ್ನಡಿಗರ ಶ್ರಮದ ತೆರಿಗೆ ಹಣದಲ್ಲಿ ಕಾಂಗ್ರೆಸ್ಸಿಗರ ದೆಹಲಿ ಜಾತ್ರೆ ಎಂದು ವ್ಯಂಗ್ಯಚಿತ್ರವನ್ನು ಬಿಜೆಪಿ ಹಂಚಿಕೊಂಡಿದೆ.
ಕನ್ನಡಿಗರ ಶ್ರಮದ ತೆರಿಗೆ ಹಣದಲ್ಲಿ ಕಾಂಗ್ರೆಸ್ಸಿಗರ ದೆಹಲಿ ಜಾತ್ರೆ.#CongressLootsKarnataka pic.twitter.com/QxyxNeFQKN
— BJP Karnataka (@BJP4Karnataka) February 7, 2024
ಕಾಂಗ್ರೆಸ್ ಕೇಂದ್ರದ ವಿರುದ್ಧ ಆರೋಪಕ್ಕೆ ಪ್ರಹ್ಲಾದ್ ಜೋಶಿ ಟ್ವೀಟಾಸ್ತ್ರ:
ಕಾಂಗ್ರೆಸ್ ಕೇಂದ್ರದ ವಿರುದ್ಧ ಆರೋಪಕ್ಕೆ ಪ್ರಹ್ಲಾದ್ ಜೋಶಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ. 13 ರಾಜ್ಯಗಳ ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯನವರೇ ಹೀಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆಂದು ಅವರ ಪಕ್ಷದವರೇ ನಗುತ್ತಿರಬೇಕು. ಅದೇನೇ ಇದ್ದರೂ, ಕರ್ನಾಟಕದ ಮುಖ್ಯಮಂತ್ರಿಗಳ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ. 13 ರಾಜ್ಯಗಳ ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯನವರೇ ಹೀಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆಂದು ಅವರ ಪಕ್ಷದವರೇ ನಗುತ್ತಿರಬೇಕು. ಅದೇನೇ ಇದ್ದರೂ, ನೆನಪಿಟ್ಟುಕೊಳ್ಳಲಿ:
-ರಾಜ್ಯಗಳು ತಮ್ಮ SGST ಯ 100% ಅನ್ನು ಪಡೆಯುತ್ತವೆ ಮತ್ತು ರಾಜ್ಯದೊಳಗೆ ಸಂಗ್ರಹಿಸಲಾದ IGST ಯ ಅಂದಾಜು 50% ರಷ್ಟು ಪಡೆಯುತ್ತಾರೆ.
-15ನೇ ಆರ್ಥಿಕ ಸಮಿತಿಯು ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸ್ಸು ಮಾಡಿಲ್ಲ. ಹೀಗಾಗಿ ಶಿಫಾರಸ್ಸು ಸ್ವೀಕರಿಸದ ಪ್ರಶ್ನೆಯೇ ಉದ್ಭವಿಸುವುದಿಲ್ಲ.
-ಆರ್ಥಿಕ ವರ್ಷ 2020-21 ರಿಂದ, ಕರ್ನಾಟಕಕ್ಕೆ ಬಂಡವಾಳ ವೆಚ್ಚ ಯೋಜನೆಗಳಿಗೆ ಸಹಾಯ ಮಾಡಲು 50 ವರ್ಷಗಳ ಬಡ್ಡಿ-ರಹಿತ ಸಾಲವಾಗಿ ರೂ 6279.94 ಕೋಟಿ ಒದಗಿಸಲಾಗಿದೆ.
-ಯುಪಿಎ ಆಡಳಿತದ 10 ವರ್ಷಗಳಿಗೆ ಹೋಲಿಸಿದರೆ ಕರ್ನಾಟಕಕ್ಕೆ ನೀಡಲಾದ ಅನುದಾನ ಗಣನೀಯವಾಗಿ ಹೆಚ್ಚಿದೆ. ಎನ್‌ಡಿಎಯ 9 ವರ್ಷಗಳಲ್ಲಿ ಈಗಾಗಲೇ 2.08 ಲಕ್ಷ ಕೋಟಿ ರೂಪಾಯಿ ಬಿಡುಗಡೆ ಮಾಡಿದೆ, ಇದು ಯುಪಿಎ ಅನುದಾನಕ್ಕಿಂತ 243% ಹೆಚ್ಚಾಗಿದೆ.
-ಈ ಆರ್ಥಿಕ ವರ್ಷದ ಬಜೆಟ್ ನಲ್ಲಿ ರೂ. 18,005 ಕೋಟಿ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲು ನಿರ್ಧಾರಿಸಲಾಗಿದೆ.

ಕರ್ನಾಟಕದ ಮುಖ್ಯಮಂತ್ರಿಗಳಿಗೆ ಇದೆಲ್ಲ ಅರ್ಥವಾಗಿದ್ದರೂ ರಾಜ್ಯದಲ್ಲಿ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ಕಾಂಗ್ರೆಸ್ ಪಕ್ಷವು ರಾಜ್ಯದ ರೈತರು ಮತ್ತು ಜನರ ಅಗತ್ಯಗಳನ್ನು ಪೂರೈಸಬೇಕು, ಆದರೆ ಅವರು ರಾಜ್ಯ ಚುನಾವಣೆಯಲ್ಲಿ ಪೂರೈಸಲಾಗದ ಭರವಸೆಗಳನ್ನು ನೀಡಿ, ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ. ಜುಲೈ'23 ರಲ್ಲಿ ಉಪಮುಖ್ಯಮಂತ್ರಿಗಳು ಈ ವರ್ಷ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಸ್ವಂತ ಆರ್ಥಿಕ ಸಲಹೆಗಾರ, "ಐದು ಖಾತರಿಗಳು (ಅವರ) ಸರ್ಕಾರಕ್ಕೆ ದೊಡ್ಡ ಆರ್ಥಿಕ ಹೊರೆಯಾಗಿ ಮಾರ್ಪಟ್ಟಿವೆ" ಎಂದು ಹೇಳಿದರು.
ಆದ್ದರಿಂದ, ಈ ಆರೋಪಗಳು ತಮ್ಮ ಆಡಳಿತದ ವೈಫಲ್ಯಗಳನ್ನು ಸಾರ್ವಜನಿಕರಿಂದ ಮರೆಮಾಚಲು ಕರ್ನಾಟಕ ಸರ್ಕಾರದ ಮತ್ತೊಂದು ವಿಫಲ ಪ್ರಯತ್ನವಾಗಿದೆ. ಆದರೆ ಈ ಚೇಷ್ಟೆಗಳು ಜನರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂಬುದನ್ನು ಮುಖ್ಯಮಂತ್ರಿಗಳು ಅರಿಯಬೇಕು.
ಕರ್ನಾಟಕದ ಮುಖ್ಯಮಂತ್ರಿಗಳ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ. 13 ರಾಜ್ಯಗಳ ಬಜೆಟ್‌ಗಳನ್ನು ಮಂಡಿಸಿರುವ ಸಿದ್ದರಾಮಯ್ಯನವರೇ ಹೀಗೆ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆಂದು ಅವರ ಪಕ್ಷದವರೇ ನಗುತ್ತಿರಬೇಕು. ಅದೇನೇ ಇದ್ದರೂ, ಕರ್ನಾಟಕದ ಮುಖ್ಯಮಂತ್ರಿಗಳ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ. 13 ರಾಜ್ಯಗಳ ಬಜೆಟ್‌ಗಳನ್ನು ಮಂಡಿಸಿರುವ…
— Pralhad Joshi (@JoshiPralhad) February 6, 2024
ಕೇಂದ್ರ ವಿರುದ್ಧ ಕಾಂಗ್ರೆಸ್ ಆರೋಪವೇನು?
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್ ನಾಯಕರು ಆರೋಪವನ್ನು ಮಾಡುತ್ತಾ ಬಂದಿದ್ದಾರೆ. ಬರ ಪರಿಹಾರವಾಗಿ ಎನ್‌ಡಿಆರ್‌ಎಫ್‌ನಿಂದ 4,663 ಕೋಟಿ ನೀಡುವಂತೆ ಮನವಿ ಮಾಡಿದ್ದೇವೆ. ಮನವಿ ಮಾಡಿ 4 ತಿಂಗಳು ಕಳೆದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂಬುದು ಸಿಎಂ ಸಿದ್ದರಾಮಯ್ಯ ಆರೋಪವಾಗಿದೆ.
ಅಲ್ಲದೆ ಕರ್ನಾಟಕ ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಹೀಗಿದ್ದರೂ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ತೆರಿಗೆ ಪಾಲನ್ನು ಉತ್ತರಕ್ಕೆ ನೀಡಲಾಗುತ್ತಿದೆ ಎಂಬುವುದು ಕರ್ನಾಟಕದ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಎಲ್ಲಾ ಸಂಸದರಿಗೂ ಈ ಪ್ರತಿಭಟನೆಗೆ ಆಹ್ವಾನ ನೀಡಲಾಗಿದೆ.
-
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications