• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಜನತೆಯ ನೆಮ್ಮದಿ ಕಾಂಗ್ರೆಸ್‌ಗೆ ಬೇಕಿಲ್ಲ!

|

ಬೆಂಗಳೂರು, ಜೂನ್ 29 : ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಪಾಲಿಸುವುದನ್ನು ಪಕ್ಷದ ಕಾರ್ಯಕರ್ತರು ಮರೆತಿದ್ದಾರೆ.

ಬೆಂಗಳೂರು ನಗರದಲ್ಲಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಆದರೆ, ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮ ಪಾಲನೆಯಾಗಿಲ್ಲ.

ಕಾಂಗ್ರೆಸ್‌ ಕಚೇರಿಗೆ ಹೋಗಲು ಕಾರು ಬಿಟ್ಟು ಸೈಕಲ್ ಏರಿದ ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಆದರೆ, ಕಾಂಗ್ರೆಸ್ ನಾಯಕರಿಗೆ ಸಾಮಾಜಿಕ ಜವಾಬ್ದಾರಿಯ ಪರವೇ ಇಲ್ಲ ಎಂದು ಟೀಕಿಸಿದ್ದಾರೆ.

ಅಂಗಡಿ, ಮಾಲ್, ಬ್ಯಾಂಕ್, ಹೋಟೆಲ್‌ಗಳಿಗೆ ಭಾಸ್ಕರ್ ರಾವ್ ಎಚ್ಚರಿಕೆ

"ಸಾಮಾಜಿಕ ಅಂತರವಿಲ್ಲದೇ ಪ್ರತಿಭಟನೆ ಮಾಡುತ್ತಿರುವುದು ಖಂಡನೀಯ. ನಗರದ ಜನತೆಯ ನೆಮ್ಮದಿ ಕಾಂಗ್ರೆಸ್ ನವರಿಗೆ ಬೇಕಾಗಿಲ್ಲ" ಎಂದು ಎನ್. ರವಿ ಕುಮಾರ್ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರದಿಂದ ಭರ್ಜರಿ ಸಿದ್ಧತೆ

ಎನ್. ರವಿ ಕುಮಾರ್ ಟ್ವೀಟ್

ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿಯ ಎನ್. ರವಿ ಕುಮಾರ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಆತಂಕ

ಬೆಂಗಳೂರು ನಗರದಲ್ಲಿ ಆತಂಕ

ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ಶನಿವಾರ 596, ಭಾನುವಾರ 700ಕ್ಕೂ ಅಧಿಕ ಪ್ರಕರಣ ನಗರದಲ್ಲಿ ದಾಖಲಾಗಿದೆ. ಆದರೆ, ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ.

ಸೈಕಲ್ ಏರಿದ ನಾಯಕರು

ಸೈಕಲ್ ಏರಿದ ನಾಯಕರು

ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಸೈಕಲ್ ಸವಾರಿ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ ಸೈಕಲ್ ತುಳಿದರು.

ಎಲ್ಲಿದೆ ಸಾಮಾಜಿಕ ಅಂತರ?

ಎಲ್ಲಿದೆ ಸಾಮಾಜಿಕ ಅಂತರ?

ಕಾಂಗ್ರೆಸ್ ಪ್ರತಿಭಟನೆ ಕೆಪಿಸಿಸಿ ಕಚೇರಿ ಮುಂದೆ ಆರಂಭವಾಯಿತು. ಈ ಚಿತ್ರದಲ್ಲಿ ನೋಡಿದರೆ ಸಾಮಾಜಿಕ ಅಂತರವನ್ನು ಹೇಗೆ ಕಾಪಾಡುತ್ತಿದ್ದಾರೆ? ಎಂಬ ಚಿತ್ರಣ ಸಿಗಲಿದೆ.

English summary
Karnataka Congress protest against fuel prices hike. Thousands of party workers take part in protest. In a tweet BJP asked where is social distancing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X