ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ನಿಂದ ರಾಜಭವನ ಚಲೋ: ಹೆದ್ದಾರಿ ತಡೆದು ಪ್ರತಿಭಟನೆ

|
Google Oneindia Kannada News

ಬೆಂಗಳೂರು,ಜನವರಿ 20:ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಕೂಡ ಧ್ವನಿ ಎತ್ತಿದೆ. ರೈತರ ಪರವಾಗಿ ಹೋರಾಟಕ್ಕಿಳಿದಿದೆ.

ಈ ನಡುವಲ್ಲೇ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಪರಿಣಾಮ ನಗರದಲ್ಲಿ ಸಂಚಾರ ದಟ್ಟಣೆ ಶುರುವಾಗಿದೆ.

ರೈತರ ಬೆಂಬಿಲಿಸಿ ಜನವರಿ 20ರಂದು ಬೃಹತ್ ಹೋರಾಟ: ಡಿಕೆ ಶಿವಕುಮಾರ್ ರೈತರ ಬೆಂಬಿಲಿಸಿ ಜನವರಿ 20ರಂದು ಬೃಹತ್ ಹೋರಾಟ: ಡಿಕೆ ಶಿವಕುಮಾರ್

ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ಮೆರವಣಿಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ, ಆನಂದರಾವ್‌ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

Congress Protests Against Farm Laws,Blocks Highways In Bengaluru

ಹೀಗಾಗಿ ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ, ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6ಕ್ಕೂ ಹೆಚ್ಚು ಕೆಎಸ್​ಆರ್​​ಪಿ ತುಕಡಿ ನಿಯೋಜನೆಗೊಂಡಿದೆ.

ಓಕಳಿಪುರಂ ಜಂಕ್ಷನ್‌ಗೆ ವಾಹನಗಳಿಗೆ ಪ್ರವೇಶ ಇಲ್ಲ. ಓಕಳಿಪುರಂನಿಂದ ಕೃಷ್ಣ ಫ್ಲೋರ್ ಮಿಲ್ ಕಡೆ ಡೈವರ್ಟ್ ಮಾಡಲಾಗಿದೆ. ಶಾಂತಲಾ ಸಿಲ್ಕ್ ನಿಂದ ಮೆಜೆಸ್ಟಿಕ್ ಗೆ ಬರುವ ವಾಹನ ಡೈವರ್ಟ್ ಮಾಡಲಾಗಿದೆ. ಮಲ್ಲೇಶ್ವರಂ ಸರ್ಕಲ್‌ನಲ್ಲಿಯೇ ವಾಹನಗಳ ಡೈವರ್ಟ್ ಮಾಡಲಾಗಿದ್ದು ರೇಸ್‌ಕೋರ್ಸ್ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಈ ನಡುವೆ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

English summary
As part of the party’s nationwide drive against the Union government’s contentious farm bills, the Karnataka unit of the Congress is staging protests. Farmers and party workers who were heading to Rajbhavan from various parts of the state were stopped by police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X