ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ್ವರವಿದ್ದರೂ ಚುನಾವಣಾ ಪ್ರಚಾರ ಬೇಕಿತ್ತೇ? ಬಿಎಸ್‌ವೈಗೆ ಕಾಂಗ್ರೆಸ್ ಪ್ರಶ್ನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 16: ಜ್ವರವಿದೆ ಎಂದು ತಿಳಿದಿದ್ದರೂ ಚುನಾವಣಾ ಪ್ರಚಾರ ಮಾಡುವುದು ಬೇಕಿತ್ತೇ ಎಂದು ಕಾಂಗ್ರೆಸ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

Recommended Video

ಸಿಎಂ ಬಿಎಸ್ವೈ ಗೆ ಕೊರೊನಾ-ಸಂಪರ್ಕಕ್ಕೆ ಬಂದ ಎಲ್ಲರೂ ಕ್ವಾರೆಂಟೈನ್ ಆಗುವಂತೆ ಸಿಎಂ ಟ್ವೀಟ್ | Oneindia Kannada

ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೊನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಪ್ರಶ್ನೆ ಮಾಡಿದೆ.

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲುಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು

ಅತ್ತ ಸಿಎಂ ಬಿಎಸ್ ವೈ ಅವರಿಗೆ 2ನೇ ಬಾರಿಗೆ ಕೋವಿಡ್ ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಇತ್ತ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದೆ.

 Congress Question Yediyurappa, Why Did He Attend Election Campaign Even After Suffering From Fever

ರಾಜ್ಯಾದ್ಯಂತ ಲಸಿಕೆ ಕೊರತೆಯಾಗಿರುವ ವರದಿಗಳು ಪ್ರತಿ ದಿನವೂ ಬರುತ್ತಿವೆ. ಆದರೂ ಆತ್ಮವಂಚನೆಯ ಸುಳ್ಳು ಹೇಳುವ ಬಿಜೆಪಿಗೆ ಕೊಂಚವೂ ಲಜ್ಜೆ ಇದ್ದಂತಿಲ್ಲ. ರಾಜ್ಯ ಸರ್ಕಾರಗಳಿಗೆ ಲಸಿಕೆಗಳನ್ನು ನೇರವಾಗಿ ಖರೀದಿಸುವ ಅನುಮತಿಯನ್ನು ಕೇಂದ್ರ ಏಕೆ ನೀಡುತ್ತಿಲ್ಲ? ಈ ಬಗ್ಗೆ ಧ್ವನಿ ಎತ್ತುವ ಧೈರ್ಯ ಏಕೆ ತೋರುತ್ತಿಲ್ಲ ತಾವು? ಎಂದು ಪ್ರಶ್ನೆ ಮಾಡಿದೆ.

ಲಸಿಕೆಗಳ ಪರಿಣಾಮದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ ಇಂದು ಪುರಾವೆ ಸಿಕ್ಕಿದೆಯಲ್ಲ. ಲಸಿಕೆಗಳು ಪರಿಣಾಮಕಾರಿಯಾಗಿದ್ದರೆ ಲಸಿಕೆ ಪಡೆದಿದ್ದ ಯಡಿಯೂರಪ್ಪ ಅವರಿಗೆ ಸೋಂಕು ತಗುಲಿದ್ದು ಹೇಗೆ, ಏಕೆ? ಲಸಿಕೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿ ಸೋಂಕಿನ ಪ್ರಭಾವ ಕಡಿಮೆಗೊಳಿಸುತ್ತದೆಯೇ ಹೊರತು ಅದೇ ಮದ್ದಾಗುವುದಿಲ್ಲ ಎಂದು ಹೇಳಿದೆ.

English summary
Congress Tweeted and ask question to chief minister BS Yediyurappa, Why Did He Attend Election Campaign Even After Suffering From Fever.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X