ಸಾಂಗ್ಲಿಯಾನ ಜೊತೆ ಸಂಧಾನ ಯಶಸ್ವಿ, ಬಂಡಾಯ ಶಮನ
ಬೆಂಗಳೂರು, ಆಗಸ್ಟ್ 12 : ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಮನವೊಲಿಸಲು ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದು, ರಾಮಸ್ವಾಮಿ ಪಾಳ್ಯದಲ್ಲಿ ಉಂಟಾಗಿದ್ದ ಬಂಡಾಯದ ಬಿಕ್ಕಟ್ಟು ಶಮನಗೊಂಡಿದೆ. ಬಂಡಾಯ ಅಭ್ಯರ್ಥಿ ನಾಮಪತ್ರವನ್ನು ವಾಪಸ್ ತೆಗೆದುಕೊಳ್ಳಲಿದ್ದಾರೆ.
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಸ್ವಾಮಿ ಪಾಳ್ಯ ವಾರ್ಡ್ ನಂ 62 ರಿಂದ ಮೇರಿ ಅವರು ಟಿಕೆಟ್ ಬಯಸಿದ್ದರು. ಆದರೆ, ಕಾಂಗ್ರೆಸ್ ಪಕ್ಷ ನೇತ್ರಾವತಿ ಕೃಷ್ಣೇಗೌಡರಿಗೆ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಮೇರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. [ರಾಮಸ್ವಾಮಿ ಪಾಳ್ಯ ವಾರ್ಡ್ ನಲ್ಲಿ ಬಂಡಾಯದ ಬಿಸಿ]

ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಅವರು ಮೇರಿ ಅವರಿಗೆ ಬೆಂಬಲ ಸೂಚಿಸಿದ್ದರು. ಪ್ರಚಾರಕ್ಕೆ ಬರುವುದಾಗಿ ಭರವಸೆ ನೀಡಿದ್ದರು. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ವಾರ್ಡ್ನಲ್ಲಿ ಬಂಡಾಯದ ಬಿಸಿ ತಟ್ಟಿತ್ತು. [ಬಿಬಿಎಂಪಿ ಚುನಾವಣೆ, ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಗಳು]
ವಾರ್ತಾ ಸಚಿವ ರೋಷನ್ ಬೇಗ್ ಅವರು ಮಂಗಳವಾರ ಎಚ್.ಟಿ.ಸಾಂಗ್ಲಿಯಾನ ಅವರೊಂದಿಗೆ ಮಾತಕತೆ ನಡೆಸಿದ್ದು ಅಸಮಾಧಾನ ಶಮನಗೊಂಡಿದೆ. ಮೇರಿ ಅವರಿಗೆ ನಾಮಪತ್ರವನ್ನು ವಾಪಸ್ ಪಡೆಯಲು ಸೂಚಿಸುತ್ತೇನೆ ಎಂದು ಸಾಂಗ್ಲಿಯಾನ ಅವರು ಭರವಸೆ ನೀಡಿದ್ದಾರೆ.
ಬಿಬಿಎಂಪಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಒಟ್ಟು 1333 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಗುರುವಾರ ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದ್ದು, ಶುಕ್ರವಾರ ಕಣದಲ್ಲಿ ಉಳಿಯುವವರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications