ಲೋಕಸಭೆ: ಬೆಂಗಳೂರು ಉತ್ತರದಿಂದ ಸ್ಪರ್ಧಿಸುವೆ ಎಂದ ರೇವಣ್ಣ
ಬೆಂಗಳೂರು, ಜನವರಿ 12: ಬೆಂಗಳೂರಿನ ಉತ್ತರದಿಂದ ಸ್ಪರ್ಧಿಸುವ ಆಶಯವನ್ನು ಮಾಜಿ ಸಚಿವ ಎಚ್‌ಎಂ ರೇವಣ್ಣ ಮತ್ತೊಮ್ಮೆ ಹೊರಹಾಕಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಚ್‌ಎಂ ರೇವಣ್ಣ, ಮೊದಲು ರಾಹುಲ್ ಗಾಂಧಿ ಆದೇಶದಂತೆ ನನ್ನದಲ್ಲದ ಕ್ಷೇತ್ರದಿಂದ ಸ್ಪರ್ಧಿಸಿದ್ದೆ ಆದರೆ ಈ ಬಾರಿ ಬೆಂಗಳೂರು ಉತ್ತರದಿಂದ ಸ್ಪರ್ಧಿಸಬೇಕೆಂದುಕೊಂಡಿದ್ದೇನೆ ಎಂದರು.
ರಾಜ್ಯದ ಹಿತದೃಷ್ಟಿಯಿಂದ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ, ಕೋಮುವಾದಿ ಬಿಜೆಪಿ ದೂರು ಇಡಬೇಕೆಂಬುದು ನಮ್ಮ ಉದ್ದೇಶವಾಗಿದೆ. ಮುಂದಿನ ಚುನಾವಣೆಯಲ್ಲೂ ಕೂಡ ಒಗ್ಗಟ್ಟಾಗಿಯೇ ಸ್ಪರ್ಧಿಸಲಿದ್ದೇವೆ ಎಂದು ತಿಳಿಸಿದರು.

ದೇಶದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಅದರಲ್ಲಿ ಅನುಮಾನವಿಲ್ಲ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಇನ್ನೂ ತೀರ್ಮಾನ ಆಗಿಲ್ಲ. ಆ ಬಗ್ಗೆ ನಮ್ಮ ಹೈಕಮಾಂಡ್ ಹಾಗೂ ಜಾತ್ಯತೀತ ಜನತಾದಳದ ನಾಯಕರು ತೀರ್ಮಾನ ಮಾಡುತ್ತಾರೆ.












Click it and Unblock the Notifications