ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ 300 ಕಡೆ ಬೀದಿಗಿಳಿದ ಕಾಂಗ್ರೆಸ್‌ ಕಾರ್ಯಕರ್ತರು

|
Google Oneindia Kannada News

ಬೆಂಗಳೂರು, ಜನವರಿ 23: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಸೋಮವಾರ ಬೆಂಗಳೂರು ನಗರದ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮೌನ ಪ್ರತಿಭಟನಾ ಪ್ರದರ್ಶನ ನಡೆಸಿದೆ.

ಟ್ರಿನಿಟಿ ಜಂಕ್ಷನ್‌ನಲ್ಲಿ ಮುಖ್ಯವಾಗಿ ನಡೆಯಲಿರುವ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಮತ್ತು ಶಾಂತಿನಗರ ಶಾಸಕ ಎನ್‌ಎ ಹ್ಯಾರಿಸ್ ಸೇರಿದಂತೆ ಪಕ್ಷದ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Milk Supply in Bengaluru : ಲಾರಿ ಮುಷ್ಕರ; ಬೆಂಗಳೂರು ದಕ್ಷಿಣದಲ್ಲಿ ನಂದಿನಿ ಹಾಲು ಪೂರೈಕೆ ವ್ಯತ್ಯಯMilk Supply in Bengaluru : ಲಾರಿ ಮುಷ್ಕರ; ಬೆಂಗಳೂರು ದಕ್ಷಿಣದಲ್ಲಿ ನಂದಿನಿ ಹಾಲು ಪೂರೈಕೆ ವ್ಯತ್ಯಯ

ಬೆಂಗಳೂರು ನಗರದ ಮೆಟ್ರೋ ಕಳಪೆ ಕಾಮಗಾರಿ ಮತ್ತು ರಸ್ತೆಗಳಲ್ಲಿನ ಸಿಂಕ್‌ಹೋಲ್‌ಗಳು ಸೇರಿದಂತೆ ನಗರದಲ್ಲಿ ಇರುವ ನಾಗರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿದ ಜನರ ಕೋಪವನ್ನು ಸರ್ಕಾರ ಮುಂದೆ ಕಾಂಗ್ರೆಸ್ ಇಟ್ಟಿದೆ. ನಗರದ ಬಹುತೇಕ ವೃತ್ತಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನಾ ಬೋರ್ಡ್‌ಗಳು ಹಾಗೂ ಕಾಂಗ್ರೆಸ್‌ ಧ್ವಜಗಳನ್ನು ಹಿಡಿದು ಮೌನ ಪ್ರತಿಭಟನೆ ನಡೆಸಿದರು.

Congress stage protest against BJP Govt over Corruption at 300 locations in Bengaluru

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಬೆಂಗಳೂರಿನಲ್ಲಿ ರಸ್ತೆ, ನೀರು ಸೇರಿದಂತೆ ಅನೇಕ ಸಮಸ್ಯೆಗಳು ತಾಂಡವವಾಡುತ್ತಿವೆ. ಬೆಂಗಳೂರಿನಲ್ಲಿ ಎಲ್ಲೇಂದರಲ್ಲಿ ಸಿಂಕ್‌ ಹೋಲ್‌ಗಳು ಕಾಣಿಸುಕೊಳ್ಳುತ್ತಿದ್ದು ಭ್ರಷ್ಟಾಚಾರದ ಕಾರಣ ಕಳಪೆ ಕಾಮಗಾರಿ ಇದಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿದೆ.

ಥಣಿಸಂದ್ರದ ಅಪಾರ್ಟ್‌ಮೆಂಟ್‌ಗೆ ನೀಡಿದ್ದ ಭೂಸ್ವಾಧೀನಾನುಭವ ಪತ್ರ ಬಿಬಿಎಂಪಿ ಹಿಂಪಡೆದಿದೆಥಣಿಸಂದ್ರದ ಅಪಾರ್ಟ್‌ಮೆಂಟ್‌ಗೆ ನೀಡಿದ್ದ ಭೂಸ್ವಾಧೀನಾನುಭವ ಪತ್ರ ಬಿಬಿಎಂಪಿ ಹಿಂಪಡೆದಿದೆ

51 ಮೆಟ್ರೋ ನಿಲ್ದಾಣಗಳು, 26 ಫ್ಲೈಓವರ್‌ಗಳು ಮತ್ತು 200ಕ್ಕೂ ಹೆಚ್ಚು ಪ್ರಮುಖ ಟ್ರಾಫಿಕ್ ಜಂಕ್ಷನ್‌ಗಳಲ್ಲಿ ಪ್ರತಿಭಟನೆಗಳನ್ನು ಆಯೋಜಿಸಿ ಕಾರ್ಯಕರ್ತರು ಆಡಳಿತರೂಢ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ನಮ್ಮ ಪ್ರತಿಭಟನೆಗಳು ನಗರದಲ್ಲಿ ಸಂಚಾರಕ್ಕೆ ಅಡ್ಡಿಯಾಗುವುದಿಲ್ಲ, ಏಕೆಂದರೆ ನಮ್ಮ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿವಿಧ ಹಗರಣಗಳನ್ನು ಎತ್ತಿ ತೋರಿಸುವ ಫಲಕಗಳನ್ನು ಮಾತ್ರ ಹಿಡಿದುಕೊಳ್ಳುತ್ತಾರೆ ಎಂದು ಈಗಾಗಲೇ ಹೇಳಿದ್ದಾರೆ.

Congress stage protest against BJP Govt over Corruption at 300 locations in Bengaluru

ಯುವಕರ ಗಮನ ಸೆಳೆಯಲು ಪಿಎಸ್ ಐ, ಪಿಡಬ್ಲ್ಯುಡಿ ಹಾಗೂ ಕೆಪಿಟಿಸಿಎಲ್ ನೇಮಕಾತಿ ಹಗರಣಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಪ್ರದರ್ಶಿಸುವ ಪ್ರತಿಭಟನಾ ಫಲಕಗಳನ್ನು ಹಿಡಿದು ಬಿಜೆಪಿ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಈಗಾಗಗಲೇ ರಾಜ್ಯದ ಹಲವೆಡೆ ಪ್ರಜಾಧ್ವನಿ ಯಾತ್ರೆಗಳನ್ನು ನಡೆಸುತ್ತಿದ್ದೆ. ಮುಂದಿನ ವಿಧಾನಸಭಾ ಚುನಾವಣೆ ಸಿದ್ಧತೆಯ ಭಾಗವಾಗಿ ಈ ಯಾತ್ರೆಯನ್ನು ಡಿಕೆ ಶಿವಕುಮಾರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮಾವೇಶ ಸಭೆಗಳನ್ನು ನಡೆಸಲಾಗುತ್ತಿದೆ.

English summary
The Karnataka Pradesh Congress Committee (KPCC) on Monday staged a silent protest against the state BJP government at more than 300 locations in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X