ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸತೀಶ್ ರೆಡ್ಡಿ ಬಿಜೆಪಿ ಸಾರಥಿ: ಕಾಂಗ್ರೆಸ್‌ಗೆ ಸಿಕ್ಕಿಲ್ವಾ?

ಬೆಂಗಳೂರು: ಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್ ಆಗಿದೆ. ಆದರೆ ಬೊಮ್ಮನಹಳ್ಳಿಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಫೈನಲ್ ಮಾಡಿಲ್ಲ. 2008ರಲ್ಲಿ ಕ್ಷೇತ್ರವಾಗಿ ಬೊಮ್ಮನಹಳ್ಳಿ ಅಸ್ತಿತ್ವಕ್ಕೆ ಬಂದ ನಂತರ 3 ಬಾರಿ ಗೆದ್ದಿರುವ ಶಾಸಕ ಸತೀಶ್ ರೆಡ್ಡಿ, ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ. ಆದರೆ ಕಾಂಗ್ರೆಸ್ ನಡೆ ಏನು ಎಂಬುದೇ ಕುತೂಹಲ ಕೆರಳಿಸಿದೆ.

ಬೊಮ್ಮನಹಳ್ಳಿ (Bommanahalli) ಕಾಂಗ್ರೆಸ್ ಟಿಕೆಟ್ ಪಡೆಯಲು ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿ ಬೆಳೆದಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ (Umapathy) 'ಕೈ' ಟಿಕೆಟ್ ಪಡೆಯುವವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲೇ ಬೊಮ್ಮನಹಳ್ಳಿ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್ ಆಗುವ ನಿರೀಕ್ಷೆ ಇತ್ತು. ಆದರೆ 2ನೇ ಪಟ್ಟಿ ಬಿಡುಗಡೆಯಾದರೂ ಬೊಮ್ಮನಹಳ್ಳಿ ಕ್ಷೇತ್ರಕ್ಕೆ 'ಕೈ' ಅಭ್ಯರ್ಥಿ ಹೆಸರು ಫೈನಲ್ ಆಗಿಲ್ಲ. 3ನೇ ಪಟ್ಟಿಗೆ ಆಕಾಂಕ್ಷಿಗಳು ಕಾಯುತ್ತಿದ್ದು, ಏನಾಗುತ್ತೋ ಎಂಬ ಚಿಂತೆಯಲ್ಲಿದ್ದಾರೆ.

Congress ticket for Bommanahalli constituency not yet finalized

ಸತೀಶ್ ರೆಡ್ಡಿ ಭರ್ಜರಿ ಪ್ರಚಾರ

ಬಿಜೆಪಿ ಹಾಲಿ MLA ಶಾಸಕ ಸತೀಶ್ ರೆಡ್ಡಿಗೆ (Sathish Reddy) ಬಿಜೆಪಿ ಮೊದಲ ಪಟ್ಟಿಯಲ್ಲೇ ಟಿಕೆಟ್ ಕನ್ಫರ್ಮ್ ಆಗಿದೆ. ಹೀಗಾಗಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈ ಮೂಲಕ ಸತತ 4ನೇ ಬಾರಿಗೆ ಆಯ್ಕೆಯಾಗುವ ನಿರೀಕ್ಷೆ ಬಿಜೆಪಿ ಶಾಸಕರದ್ದು. ಎದುರಾಳಿಯೇ ಇಲ್ಲದೆ ಪ್ರಚಾರ ಭರ್ಜರಿಯಾಗಿ ಸಾಗಿದ್ದು, ಕಾಂಗ್ರೆಸ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಈಗಾಗಲೇ ಕೆಲವು ಹೆಸರುಗಳನ್ನು ಫೈನಲ್ ಮಾಡಿರುವ ಕಾಂಗ್ರೆಸ್ ನಾಯಕರು, ಕೆಲವೇ ದಿನದಲ್ಲಿ ನಿರ್ಧಾರ ಪ್ರಕಟಿಸಲಿದ್ದಾರೆ.

ಕಾರ್ಮಿಕ ಕ್ಷೇತ್ರ ಬೊಮ್ಮನಹಳ್ಳಿ

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಹತ್ತಾರು ಗಾರ್ಮೆಂಟ್ಸ್ ತಲೆ ಎತ್ತಿವೆ. ಇಲ್ಲಿ ಸಾವಿರಾರು ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಹೊರ ರಾಜ್ಯದಿಂದ ಬಂದು ಬದುಕು ಕಟ್ಟಿಕೊಂಡಿರುವ ಕಾರ್ಮಿಕರ ಸಂಖ್ಯೆ ಸಾಕಷ್ಟಿದೆ. ಈ ಎಲ್ಲಾ ಲೆಕ್ಕಾಚಾರಗಳ ಆಧಾರದಲ್ಲೇ ಎಲೆಕ್ಷನ್ ನಡೆಯುತ್ತದೆ. 2018ರ ಚುನಾವಣೆಯಲ್ಲಿ ಸತೀಶ್ ರೆಡ್ಡಿ ಬಿಜೆಪಿಯಿಂದ ಸತತ 3ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸುಷ್ಮಾ ರಾಜಗೋಪಾಲ ರೆಡ್ಡಿ ವಿರುದ್ಧ 47,162 ಮತಗಳ ಅಂತರದಲ್ಲಿ ಗೆದ್ದರು. ಒಟ್ಟು 1,11,863 ಮತ ಪಡೆಯುವ ಮೂಲಕ ಸತೀಶ್ ರೆಡ್ಡಿ ಗೆದ್ದಿದ್ದರು.

Congress ticket for Bommanahalli constituency not yet finalized

ಬೊಮ್ಮನಹಳ್ಳಿ ಬಿಜೆಪಿ ಭದ್ರಕೋಟೆ

ಬೊಮ್ಮನಹಳ್ಳಿ ಕ್ಷೇತ್ರ ಬಿಜೆಪಿ ಭದ್ರಕೋಟೆ ಎಂದೇ ಗುರುತಿಸಿಕೊಂಡಿದೆ. 2008ರಲ್ಲಿ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಪಡೆದ ನಂತರ ಬೊಮ್ಮನಹಳ್ಳಿ ಬಿಜೆಪಿ ಪಕ್ಷದ ಭದ್ರಕೋಟೆ ಎಂದೇ ಕರೆಯಲ್ಪಡುತ್ತಿದೆ. ಇದಕ್ಕೂ ಮೊದಲು ಕೂಡ ಈ ಭಾಗದಲ್ಲಿ ಬಿಜೆಪಿ ಬಲವಾದ ವೋಟ್ ಬ್ಯಾಂಕ್ ಹೊಂದಿತ್ತು. ಆದರೆ ಈ ಬಾರಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಿಸುವ ನಿರೀಕ್ಷೆ ಸ್ಥಳೀಯ ಕಾಂಗ್ರೆಸ್ ನಾಯಕರದ್ದು. ಆದರೆ ಈವರೆಗೂ ಟಿಕೆಟ್ ಫೈನಲ್ ಆಗದಿರುವುದು ಗೊಂದಲ ಸೃಷ್ಟಿಸುತ್ತಿದೆ.

ಕಾಂಗ್ರೆಸ್‌ಗೆ ಒಳಜಗಳದ ಸಂಕಷ್ಟ

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಲು ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸಿದ್ದರೂ, ಒಳಜಗಳದ ಸಂಕಷ್ಟ ತಪ್ಪುತ್ತಿಲ್ಲ. ಅದರಲ್ಲೂ ಸ್ಥಳೀಯ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಕೇಂದ್ರದ ವರಿಷ್ಠರ ಎದುರಲ್ಲೇ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ಗರಂ ಆಗಿದ್ದರು. ಮತ್ತೊಂದೆಡೆ ಇನ್ನೂ ಹಲವರು ಈ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಎಲ್ಲಾ ಕಾರಣಕ್ಕೆ ಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಫೈನಲ್ ಆಗುವುದು ತಡವಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ.

ಒಟ್ನಲ್ಲಿ ಬಿಜೆಪಿ ಮತ್ತೊಮ್ಮೆ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಲು ಸಜ್ಜಾಗಿದೆ. ಆದರೆ ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ತನ್ನ ಬಾವುಟ ಹಾರಿಸಲು ಕಾಯುತ್ತಿದೆ. ಹೀಗಾಗಿ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಎತ್ತ ಸಾಗಲಿದೆ ಎಂಬುದನ್ನ ಕಾದು ನೋಡಬೇಕಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+