ರಾಜ್ಯ ಸರ್ಕಾರಕ್ಕೆ 3 ವರ್ಷ ಪೂರೈಕೆ; ತುಮಕೂರು ಕಾರ್ಯಕ್ರಮಕ್ಕೆ ಗಣ್ಯರ ಆಹ್ವಾನ, ಹಕ್ಕುಪತ್ರ-ಕಂದಾಯ ಸೌಲಭ್ಯ ವಿತರಣೆ

ಬೆಂಗಳೂರು; ಕರ್ನಾಟಕ ಕಾಂಗ್ರೆಸ್ ಸರ್ಕಾರ 3 ವರ್ಷ ಪೂರೈಸುತ್ತಿರುವ ಹಿನ್ನೆಲೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮೇ 19ರಂದು ಹಮ್ಮಿಕೊಂಡಿರುವ 'ಪ್ರಗತಿಯತ್ತ ಕರ್ನಾಟಕ' ಸಾರ್ಥಕ ಸೇವೆಗಳ ಸಮರ್ಪಣಾ ಕಾರ್ಯಕ್ರಮ ಜರುಗಲಿದೆ. ಈ ವೇಳೆ ಫಲಾನುಭವಿಗಳಿಗೆ ಹಕ್ಕುಪತ್ರ, ಪಿಂಚಣಿ ಇನ್ನಿತರ ಸೌಕರ್ಯ ವಿತರಿಸಲಾಗುತ್ತದೆ. ಈ ಹಿನ್ನೆಲೆ ಇಂದು ಶನಿವಾರ ಗೃಹ ಸಚಿವ ಜಿ.ಪರಮೇಶ್ವರ ಅವರು ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರನ್ನು ಖುದ್ದು ಆಹ್ವಾನಿಸಿದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು, ಸಿಎಂ ಸಿದ್ದರಾಮಯ್ಯ ಅವರನ್ನು ಅವರ ನಿವಾಸಕ್ಕೆ ತೆರಳಿ ಆಮಂತ್ರಿಸಿದರು. ಡಿಕೆ ಸುರೇಶ್ ಅವರಿಗೆ ಆಮಂತ್ರಣ ತಲುಪಿದೆ. ಈ ಬೃಹತ್ ಕಾರ್ಯಕ್ರಮ ಪ್ರಯುಕ್ತ ನೆನೆ ಸುದ್ದಿಗೋಷ್ಠಿ ನಡೆಸಿ ಗೃಹ ಸಚಿವರು ವಿವರ ನೀಡಿದ್ದಾರೆ.

Congress

ತುಮಕೂರಿನ ಸದರಿ ಕಾರ್ಯಕ್ರಮದಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಸಾರಿಗೆ ಮುಷ್ಕರ ಕಾರಣದಿಂದಾಗಿ ಮೇ 20ರ ಬದಲಾಗಿ ಕಾರಣಾಂತರಗಳಿಂದ ಮುನ್ನಾ ದಿನ ಮೇ 19ಕ್ಕೆ ಅಧಿಕೃತವಾಗಿ ಕಾರ್ಯಕ್ರಮ ನಿಗದಿಯಾಗಿದೆ ಎಂದರು. ನೆನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಜನಸಮುದಾಯದೊಂದಿಗೆ ಹಂಚಿಕೊಳ್ಳಲಿದೆ ಎಂದರು.

SSLC: ಮಗನಿಗೆ 55% ಅಂಕ, ವಿಶೇಷ ಕೇಕ್ ಕತ್ತರಿಸಿದ ಸಂಭ್ರಮಿಸಿದ ಕುಟುಂಬ; ನೆಟ್ಟಿಗರಿಂದ ಭಾರೀ ಮೆಚ್ಚುಗೆ
SSLC: ಮಗನಿಗೆ 55% ಅಂಕ, ವಿಶೇಷ ಕೇಕ್ ಕತ್ತರಿಸಿದ ಸಂಭ್ರಮಿಸಿದ ಕುಟುಂಬ; ನೆಟ್ಟಿಗರಿಂದ ಭಾರೀ ಮೆಚ್ಚುಗೆ

ಹಕ್ಕುಪತ್ರ, ಪೌತಿ ಖಾತೆ ಇತರ ಸೌಲಭ್ಯ ವಿತರಣೆ

ಪ್ರಮುಖವಾಗಿ ಕಂದಾಯ ಇಲಾಖೆಯಲ್ಲಿ ಬಹುಕಾಲದಿಂದ ಜಮೀನು ವಾರಸುದಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಅಭೂತಪೂರ್ವ ಅಭಿವೃದ್ಧಿ ಕೆಲಸಗಳು ನಡೆದಿವೆ. ಮೇ 19ರ ಕಾರ್ಯಕ್ರಮದಲ್ಲಿ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 14 ಲಕ್ಷ ಜನರಿಗೆ ಈ ಸೌಲಭ್ಯಗಳು ದೊರೆತಿವೆ ಎಂದು ಅವರು ತಿಳಿಸಿದರು.

682 ಕೋಟಿ ರೂ ಯೋಜನೆಗಳಿಗೆ ಸಿಎಂ ಚಾಲನೆ

ತುಮಕೂರು ಜಿಲ್ಲೆಯಲ್ಲಿ ಆಗಿರುವ ಇತರೆ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಸುಮಾರು 682 ಕೋಟಿ ರೂ.ಗಳ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.

ಇದು ಸರ್ಕಾರಿ ಕಾರ್ಯಕ್ರಮ, ಪಕ್ಷಾತೀತ ಕಾರ್ಯಕ್ರಮ ಎಂದು ಪುನರುಚ್ಚರಿಸಿದರು. ಅಂತೆಯೇ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಸಂಸದರು, ಮುಖಂಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಆಗಮಿಸಲಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+