ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಜನವರಿ 20ರಂದು ಕಾಂಗ್ರೆಸ್‌ನಿಂದ ರೈತರ ಪರ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ಜನವರಿ 11:ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರಿಗೆ ಬೆಂಬಲ ನೀಡಿ ಜನವರಿ 20 ರಂದು ಬೆಂಗಳೂರಿನಲ್ಲಿಕಾಂಗ್ರೆಸ್ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಜನವರಿ 20 ರಂದು ಸ್ವಾತಂತ್ರ್ಯ ಉದ್ಯಾನವನದಿಂದ ರಾಜಭವನದವರೆಗೆ ರೈತರ ಪರ ಪ್ರತಿಭಟನಾ ಮೆರವಣಿಗೆ ನಡೆಸಲಿದೆ ಎಂದಿದ್ದಾರೆ.

ರೈತರಿಗೆ ಮೊದಲ ಜಯ, ಕೃಷಿ ಕಾಯ್ದೆಗಳಿಗೆ ತಡೆ ನೀಡಲು ಸುಪ್ರೀಂಕೋರ್ಟ್ ಸೂಚನೆರೈತರಿಗೆ ಮೊದಲ ಜಯ, ಕೃಷಿ ಕಾಯ್ದೆಗಳಿಗೆ ತಡೆ ನೀಡಲು ಸುಪ್ರೀಂಕೋರ್ಟ್ ಸೂಚನೆ

2021 ಅನ್ನು ಈಗಾಗಲೇ ಹೋರಾಟ ಮತ್ತು ಸಂಘಟನೆಯನ್ನು ಬಲಪಡಿಸುವ ವರ್ಷ ಎಂದು ಘೋಷಿಸಲಾಗಿರುವುದರಿಂದ, ಕಾಂಗ್ರೆಸ್ ಅನ್ನು ಕೇಡರ್ ಆಧಾರಿತ ಪಕ್ಷವನ್ನಾಗಿ ಪರಿವರ್ತಿಸಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಅದ್ಯಕ್ಷರು ಹೇಳಿದರು.

Congress To Hold Pro Farmers Protest In Bengaluru On January 20

ಇಂದು ಹುಬ್ಬಳ್ಳಿಯಲ್ಲಿ ಬೆಳಗಾವಿ ವಿಭಾಗದ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಡಿಕೆಶಿ, ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಮತ್ತು ಕೃಷಿ ಸಮುದಾಯ ಎದುರಿಸುತ್ತಿರುವ ಇತರ ಸಮಸ್ಯೆಗಳನ್ನು ಎತ್ತಿ ಹಿಡಿಯಲು ಎಐಸಿಸಿಯ ನಿರ್ದೇಶನಗಳನ್ನು ಅನುಸರಿಸಿ ಈ ಮೆರವಣಿಗೆ ಯೋಜಿಸಲಾಗಿದೆ ಎಂದರು.

Recommended Video

ಕೊನೆಗೂ BJP cabinet ವಿಸ್ತರಣೆ ಒಳ್ಳೆ ಕಾಲ ಬಂತು!! | Oneindia Kannada

ರೈತರ ಪರವಾದ ಈ ಪ್ರತಿಭಟನಾ ಮೆರವಣಿಗೆಯನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಮತ್ತು ರೈತರನ್ನು ಆಯಾ ಪ್ರದೇಶಗಳಿಂದ ಕನಿಷ್ಠ ಐದು ಬಸ್‌ಗಳಲ್ಲಿ ಕರೆತರುವಂತೆ ಬ್ಲಾಕ್ ಮತ್ತು ಜಿಲ್ಲಾ ಮಟ್ಟದ ಅಧ್ಯಕ್ಷರಿಗೆ ಡಿಕೆ ಶಿವಕುಮಾರ್ ಸೂಚಿಸಿದರು. ಅಲ್ಲದೆ ತಳಮಟ್ಟದಲ್ಲಿ ಪಕ್ಷವನ್ನು ಪುನರ್ನಿರ್ಮಿಸುವ ಮೊದಲ ಹೆಜ್ಜೆ ಇದಾಗಿದೆ ಎಂದು ಅವರು ಹೇಳಿದರು.

English summary
KPCC Presidents DK Shivakumar Said that Congress To Hold Pro Farmers Protest In Bengaluru On January 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X