ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕೊರೊನಾ ಅವ್ಯವಹಾರ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ'

|
Google Oneindia Kannada News

ಬೆಂಗಳೂರು, ಜುಲೈ 20: 'ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಇದರ ಬಗ್ಗೆ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ' ಎಂದು ಕಾಂಗ್ರೆಸ್ ಮಾಜಿ ಸಚಿವ ಯು.ಟಿ ಖಾದರ್ ಒತ್ತಾಯಿಸಿದ್ದಾರೆ.

Recommended Video

Drone Prathap Warned by German Company BillzEye | Oneindia Kannada

ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ, ಕೋವಿಡ್ ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ರಾಜ್ಯಾದ್ಯಂತ ಕೋವಿಡ್ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಜತೆ ಸೋಮವಾರ ಸಮಾಲೋಚನೆ ನಡೆಸಿದರು.

ವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದಿಂದ 2,200 ಕೋಟಿ ಭ್ರಷ್ಟಾಚಾರವೈದ್ಯಕೀಯ ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದಿಂದ 2,200 ಕೋಟಿ ಭ್ರಷ್ಟಾಚಾರ

ಈ ವೇಳೆ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಚ್.ಕೆ ಪಾಟೀಲ್ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಉಪಸ್ಥಿತರಿದ್ದರು. ಮುಂದೆ ಓದಿ...

ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ

ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ

ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಲೇ ಇದೆ. ಇಲ್ಲಿಯವರೆಗೆ ನಾಲ್ಕು ತಿಂಗಳು ಕಳೆದಿದ್ದು, 70 ಸಾವಿರ ಗಂಟಲು ದ್ರವ ಪರೀಕ್ಷೆ ರಿಸಲ್ಟ್ ಬರಬೇಕು. ಕೊವಿಡ್ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯವಾಗಿದೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರವಾಗಿದೆ. ಮಂತ್ರಿಗಳು ದಿನಕ್ಕೊಂದು ಹೇಳಿಕೆ ನೀಡ್ತಾರೆ. ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟ ಎರಡು ಎದುರಾಗಿದೆ. ಪ್ರತಿಪಕ್ಷವಾಗಿ ನಾವು ಇದರ ವಿರುದ್ಧ ಹೋರಾಟ ಮಾಡ್ತೇವೆ. ಜನಜಾಗೃತಿ ಮೂಡಿಸುವ ಕೆಲಸ ಮಾಡ್ತೇವೆ. ಜನರಿಗಾಗಿ ಸಹಾಯವಾಣಿ ಆರಂಭಿಸುತ್ತೇವೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸರ್ಕಾರದ ಕರ್ಮಕಾಂಡ ಬಯಲಾಗ್ತಿದೆ

ಸರ್ಕಾರದ ಕರ್ಮಕಾಂಡ ಬಯಲಾಗ್ತಿದೆ

'ನಾವು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದೆವು. ಅವರು ಮೊದಲು ಉತ್ತರ ಕೊಡಲಿ. ಮೆಡಿಕಲ್ ಕಿಟ್ ಖರೀದಿ ಅವ್ಯವಹಾರದ ಬಗ್ಗೆ ವಿವರ ಕೊಡಲಿ. ಕೊರೊನಾದಲ್ಲಿ ಮಾಡಿರುವ ಕರ್ಮಕಾಂಡ ಬಯಲಾಗ್ತಿದೆ. ರಾಜ್ಯದ ಜನರಿಗೆ ಎಲ್ಲವೂ ಈಗ ಅರ್ಥವಾಗ್ತಿದೆ. ಬಿಬಿಎಂಪಿ ಆಯುಕ್ತರು ಜನರ ಬಳಿ ಹೋಗಿ ಮನವರಿಕೆ ಮಾಡಿಕೊಡ್ತಿದ್ರು. ಪ್ರಮಾಣಿಕ ಪ್ರಯತ್ನ ಮಾಡಿದ್ರು ಅನ್ನಿಸಿದೆ. ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರ ಬಗ್ಗೆ ನಾನು ಹೆಚ್ಚೇನು ಮಾತನಾಡಲ್ಲ' ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಅಯೋಗ್ಯತೆಗೆ ಇದಕ್ಕಿಂತ ಸಾಕ್ಷಿ ಬೇಕೇ? ಸಿದ್ದರಾಮಯ್ಯರಾಜ್ಯ ಸರ್ಕಾರದ ಅಯೋಗ್ಯತೆಗೆ ಇದಕ್ಕಿಂತ ಸಾಕ್ಷಿ ಬೇಕೇ? ಸಿದ್ದರಾಮಯ್ಯ

ಸದನ ಸಮಿತಿ ರಚನೆ ಮಾಡಲಿ

ಸದನ ಸಮಿತಿ ರಚನೆ ಮಾಡಲಿ

'ಆಡಳಿತ ಪಕ್ಷ,ಪ್ರತಿಪಕ್ಷದ ವಿರುದ್ಧ ರಾಜಕೀಯ ಟೀಕೆಟಿಪ್ಪಣಿ ಮಾಡಲ್ಲ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಆರೋಪ ಕೇಳಿಬರ್ತಿದೆ. ಹೈಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆಯಾಗಿದೆ. ಕಿಟ್ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಇದರ ಬಗ್ಗೆ ತನಿಖೆಗೆ ಸದನ ಸಮಿತಿ ರಚನೆ ಮಾಡಲಿ' ಎಂದು ಸರ್ಕಾರಕ್ಕೆ ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಸರ್ಕಾರ ಎಲ್ಲದರಲ್ಲೂ ಅವ್ಯವಹಾರವನ್ನ ನಡೆಸ್ತಿದೆ

ಸರ್ಕಾರ ಎಲ್ಲದರಲ್ಲೂ ಅವ್ಯವಹಾರವನ್ನ ನಡೆಸ್ತಿದೆ

''ತಮಿಳುನಾಡು ಸರ್ಕಾರ 4 ಲಕ್ಷ 80 ಸಾವಿರಕ್ಕೆ ವೆಂಟಿಲೇಟರ್ ಖರೀದಿ ಮಾಡಲಾಗಿದೆ. ಆದರೆ ನಮ್ಮ ಸರ್ಕಾರ ೧೮ ಲಕ್ಷಕ್ಕೆ ಖರೀದಿ ಮಾಡಿದೆ. ಬಿಬಿಎಂಪಿ ಆಯುಕ್ತರನ್ನ ವರ್ಗಾವಣೆ ಮಾಡಲಾಗಿದೆ. ಅವ್ಯವಹಾರವನ್ನ ಮುಚ್ಚಿಹಾಕುವ ಪ್ರಯತ್ನ ಮಾಡ್ತಿದೆ. ಕೂಡಲೇ ಇದರ ಬಗ್ಗೆ ತನಿಖೆ ನಡೆಸಬೇಕು. ಬೆಡ್ ಗಳ ಕೊರತೆ ಕೂಡ ಹೆಚ್ಚಾಗಿದೆ. ಇದನ್ನ ನಿವಾರಿಸುವ ಕೆಲಸ ಮಾಡಬೇಕು. ಸರ್ಕಾರ ಎಲ್ಲದರಲ್ಲೂ ಅವ್ಯವಹಾರವನ್ನ ನಡೆಸ್ತಿದೆ' ಎಂದು ಸರ್ಕಾರದ ವಿರುದ್ಧ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.

English summary
KPCC President DK Shivakumar, Senior leaders held a consultation with the Congress Covid task force and medical unit at KPCC office on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X