ವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ: ಬೊಮ್ಮಾಯಿ

ಬೆಂಗಳೂರು, ಜೂನ್ 06: ಸರ್ಕಾರ ರಚಿಸಿದ ಕೆಲವು ದಿನಗಳಲ್ಲಿಯೇ ಮದದಿಂದ ಜನ ಕೊಟ್ಟ ಅಧಿಕಾರವನ್ನು ವಿರೋಧಿಗಳ ದಮನಕ್ಕಾಗಿ ಇದೆ ಎಂದು ಕಾಂಗ್ರೆಸ್‌ನವರು ಭಾವಿಸಿದ್ದರೆ ಖಂಡಿತವಾಗಿಯೂ ಅದಕ್ಕೆ ನೀವು ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು.

ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನ ಕಳೆದಿಲ್ಲ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರ ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು ಖಂಡನೀಯ. ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ ಸರಿಯಲ್ಲ. ಇದು 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ ಎಂದು ತಿರುಗೇಟು ನೀಡಿದರು.

Congress Will Have To Pay Price If Uses Power To Suppress The Opposition, say bommai

ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆ ಪಡೆಯುವ ಕಾಲ ಈಗಿಲ್ಲ. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌ ಎಂದು ಹೇಳಿದರು.

ಇತ್ತೀಚೆಗೆ ಸಿದ್ದರಾಮಯ್ಯನರ ವಿರುದ್ಧ ಮಾತನಾಡದ ವ್ಯಕ್ತಿಯೊಬ್ಬರನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಮಾಡಲಾಗಿತ್ತು. ಹೀಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೆಲವೆಡೆ ಹಿಂದೂ ಕಾರ್ಯಕರ್ತರ ಮೇಲೆ, ಸರ್ಕಾರ ನಡೆ ಪ್ರಶ್ನಿಸದವರ ಮೇಲೆಲ್ಲ ಹಲ್ಲೆಗಳಾಗುತ್ತಿದೆ. ಈ ನಡೆಯನ್ನು ಹಿಂದುಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಖಂಡಿಸಿದ್ದಾರೆ.

ಅಲ್ಲದೇ ಈ ಹಿಂದೆ ಪಠ್ಯ ಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ, ಗೋ ಹತ್ಯೆ ನಿಷೇಧ ಕಾಯ್ದೆಯ ವಿಚಾರಗಳನ್ನು ಕಾಂಗ್ರೆಸ್ ಸರಿಪಡಿಸುತ್ತದೆ. ಕೋಮು ಸೌಹಾರ್ದತೆ ಕದಡಿದರೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದೆಲ್ಲ ಎಂಬಿ ಪಾಟೀಲ್ ಹೇಳಿದ್ದರು. ಅವರ ಈ ಮಾತಿಗೆ ಸಾಕಷ್ಟು ಟೀಕೆಗಳು ವ್ಯಕ್ತವಾದವು.

Congress Will Have To Pay Price If Uses Power To Suppress The Opposition, say bommai

ಕಾಂಗ್ರೆಸ್ ನಾಯಕರಿಗೆ ಅಧಿಕಾರ ಅಮುಲು ಏರಿದೆ. ಅದಕ್ಕೆ ಹೀಗೆಲ್ಲ ಮಾತನಾಡುತ್ತಿದ್ದಾರೆ. ಒಂದು ವೇಳೆ ಎದುರಾಳಿಗಳ ದಮನಕ್ಕೆ ಕೈ ಹಾಕಿದರೆ ನೀವು ತಕ್ಕ ಬೆಲೆ ತೆರಬೇಕಾಗುತ್ತದೆ. ಗೋ ಹತ್ಯೆ ನಿಷೇಧ ಕಾನೂನು ತೆರವಿಗೆ ಕೈ ಹಾಕಿದರಂತೂ ಕಾಂಗ್ರೆಸ್‌ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+