ಶಾಸಕ ಹ್ಯಾರಿಸ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ
Recommended Video

ಬೆಂಗಳೂರು, ಜೂನ್ 8: ರಾಜ್ಯ ಸಚಿವ ಸಂಪುಟದಲ್ಲಿ ಅವಕಾಶ ಸಿಗದ ಹಲವಾರು ಶಾಸಕರ ಬೆಂಬಲಿಗರು ಶುಕ್ರವಾರ ನಗರದ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಕುರುಬರಿಗೆ ಅವಕಾಶ ಸಿಕ್ಕಿಲ್ಲ ಎಂದು ಆರೋಪಿಸಿ ರಾಜ್ಯ ಕುರುಬರ ಸಂಘ ಕರೆ ನೀಡಿದ್ದ ಸಂಘದ ಸದಸ್ಯರು ಕೆಪಿಸಿ ಕಚೇರಿ ಮುಂದೆ ಧರಣಿ ನಡೆಸಿದರು. ಮತ್ತೊಂದೆಡೆ ಶಾಂತಿನಗರ ಶಾಸಕ ಎನ್‌ಎ ಹ್ಯಾರಿಸ್ ಬೆಂಬಲಿಗರು ತಮ್ಮ ಕ್ಷೇತ್ರದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಮೂವರು ವ್ಯಕ್ತಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು. ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮವಾಗಿ ಭದ್ರತೆ ಕೈಗೊಂಡಿದ್ದರೂ ಮೂವರು ಕಾರ್ಯಕರ್ತರು ಆತ್ಮಹತ್ಯೆಗೆ ಯತ್ನಿಸಿದರಾದರೂ ಪೊಲೀಸರು ಅದನ್ನು ವಿಫಲಗೊಳಿಸಿದರು. ಇದೇ ವೇಳೆ ಕೆಲವು ಬೆಂಬಲಿಗರು ತಲೆ ಬೋಳಿಸಿಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಪಕ್ಷದ ಮುಖಂಡರು ಹಾಗೂ ಹೈಕಮಾಂಡ್‌ನ ಗಮನ ಸೆಳೆಯಲು ಪ್ರಯತ್ನಿಸಿದರು. ಕಳೆದ ಮೂರು ದಿನಗಳಿಂದ ಸಚಿವ ಸಂಪುಟ ವಿಸ್ತರಣೆ ಬಳಿಕ ನಡೆಯುತ್ತಿರುವ ಧರಣಿ ಪ್ರತಿಭಟನೆಗಳು ಇಂದೂ ಕೂಡ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಪಕ್ಷದ ಮುಖಂಡರು ತೆರೆ ಮರೆಯ ಪ್ರಯತ್ನ ನಡೆಸಿದ್ದಾರೆ. ಆದರೆ ಸ್ಥಾನ ಕಳೆದುಕೊಂಡ ಶಾಸಕರ ಬೆಂಬಲಿಗರು ಮಾತ್ರ ಕೆಪಿಸಿಸಿ ಕಚೇರಿ ಎದುರು ಬಹಿರಂಗವಾಗಿಯೇ ಪ್ರತಿಭಟನೆ ನಡೆಸುವ ಮೂಲಕ ಅಸಮಾಧಾನವನ್ನು ಹೊರಹಾಕಿದ್ದಾರೆ.












Click it and Unblock the Notifications