ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎನ್.ಆರ್. ಸಂತೋಷ್, ಸಿಪಿ ಯೋಗೇಶ್ವರ್ ಬಂಧನಕ್ಕೆ ಆಗ್ರಹ!

|
Google Oneindia Kannada News

ಬೆಂಗಳೂರು, ಡಿ. 03: ಮಾಜಿ ಸಚಿವ, ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರು ಮಾಡಿರುವ ಆರೋಪದಿಂದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಹಾಗೂ ಮಾಜಿ ಸಚಿವ ಸಿಪಿ ಯೋಗೇಶ್ವ ರ್ ಅವರಿಗೆ ಸಂಕಷ್ಟ ಎದುರಾಗಿದೆ. ಇದೇ ವಿಚಾರವನ್ನಿಟ್ಟುಕೊಂಡು ಬಿಜೆಪಿ ಸರ್ಕಾರ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಆನಂದ್ ರಾವ್ ಸರ್ಕಲ್ ಬಳಿ ಇರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿಧನಾ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ವಿರುದ್ದ ಘೋಷಣೆಗಳನ್ನು ಕೂಗಿದರು. ಇಬ್ಬರೂ ಬಿಜೆಪಿ ಸರ್ಕಾರ ರಚನೆ ಮಾಡುವ ವೇಳೆ, ಚುನಾವಣೆಯ ವೇಳೆ ಅಕ್ರಮ ಹಣ ತೊಡಗಿಸಿಕೊಂಡಿರುವುದು ಗೊತ್ತಾಗಿದೆ. ಈ ಇಬಬರನ್ನು ತಕ್ಷಣ ಬಂಧಿಸಿ ಇವರುಗಳ ವಿರುದ್ಧ ತನಿಖೆಯಾಗಲೇಬೇಕು ಎಂದು ಪ್ರತಿಭಟನೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.

Congress Workers Staged A Protest Demanding Arrest Of NR Santosh CP Yogeshwar

Recommended Video

Jadeja ಬದಲು Chahal bowling ಮಾಡಿದ್ದು ಏಕೆ | Oneindia Kannada

ಈ ಸಂದರ್ಭದಲ್ಲಿ ಮಾತನಾಡಿದ ಕವಿಕಾ ಮಾಜಿ ಅಧ್ಯಕ್ಷ ಮನೋಹರ್ ಅವರು, ಸಿಪಿ ಯೋಗೇಶ್ವರ್ ಹಾಗೂ ಎನ್. ಆರ್. ಸಂತೋಷ್ ಅಕ್ರಮ ಹಣ ಸಾಗಾಣಿಕೆಯಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕು. ಈ ಇಬ್ಬರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.

English summary
CP Yogeshwar and N. R. Santosh is involved in illicit money laundering and should be investigated. Congress workers staged a protest demanding the immediate arrest of the both. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X