ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಸದ ತೇಜಸ್ವಿ , ಸೂಲಿಬೆಲೆ ಕೊಲೆಗೆ ಸಂಚು: ಪೊಲೀಸರಿಂದ ಬಂತು ಆಘಾತಕಾರಿ ಮಾಹಿತಿ

|
Google Oneindia Kannada News

Recommended Video

CAA ಪರವಾಗಿದ್ದಕ್ಕೆ ಇಂತಹ ಪ್ಲಾನ್ ಮಾಡಿದ ಮುಸ್ಲೀಂ ಸಂಘಟನೆ | TEJASVI SURYA | ONEINDIA KANNADA

ಬೆಂಗಳೂರು, ಜನವರಿ 17: ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎನ್ನುವ ಮಾಹಿತಿಯನ್ನು ಪೊಲೀಸರು ಬಿಚ್ಚಿಟ್ಟಿದ್ದಾರೆ.

ಡಿಸೆಂಬರ್ 22ರಂದು ಸಿಎಎ ಪರ ನಡೆಯುತ್ತಿದ್ದ ಸಮಾವೇಶದಲ್ಲಿ ಸಿಎಎ ಸಮಾವೇಶದಲ್ಲಿ ಆರು ಮಂದಿ ಎಸ್‌ಡಿಪಿಐ ಕಾರ್ಯಕರ್ತರು ಜನರ ಮೇಲೆ ಹಲ್ಲೆ ನಡೆಸಿದ್ದರು. ಆರು ಮಂದಿಯನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದರು.

ಸಿಎಎ ಪರ ಮೆರವಣಿಗೆಯಲ್ಲಿ ಭಾಗವಹಿಸಿದವನಿಗೆ ಚಾಕು ಇರಿತಸಿಎಎ ಪರ ಮೆರವಣಿಗೆಯಲ್ಲಿ ಭಾಗವಹಿಸಿದವನಿಗೆ ಚಾಕು ಇರಿತ

ವಿಚಾರಣೆ ಸಂದರ್ಭದಲ್ಲಿ ಅವರ ಟಾರ್ಗೆಟ್ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯಾಗಿತ್ತು ಎಂದು ತಿಳಿಸುಬಂದಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಅವರು ಮಾತನಾಡಿದ್ದಕ್ಕೆ ಅವರನ್ನು ಮುಗಿಸಲು ಈ ಆರು ಮಂದಿ ಉಪಾಯ ಮಾಡಿದ್ದರು ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

Conspiracy To Murder MP Tejasvi Surya

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವರುಣ್ (31) ಎಂಬಾತನ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಲಾಗಿತ್ತು.

ಇಂದು ಬೆಂಗಳೂರಿನ ಟೌನ್ ಹಾಲ್ ಎದುರು ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಮೆರವಣಿಗೆಯಲ್ಲಿ ಭಾಗವಹಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ಜೆ.ಸಿ ರೋಡ್ ನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಕೊಲೆ ಯತ್ನ ಮಾಡಲಾಗಿತ್ತು. ನಡು ರಸ್ತೆಯಲ್ಲಿಯೇ ಏಕಾಏಕಿ ಚಾಕುವಿನಿಂದ ಚುಚ್ಚಿದ್ದರು.

ಈ ಸಂದರ್ಭದಲ್ಲಿ ಸಹಾಯಕ್ಕೆ ಬಂದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರು ಮಂದಿಯನ್ನು ಬಂಧಿಸಲಾಗಿತ್ತು.

English summary
Police Revealed that In CAA Rally SDPI 6 workers planned to murder MP tejasvi surya and Chakravarti sulibele.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X