ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನವಕರ್ನಾಟಕ ನಿರ್ಮಾಣದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ : ನಿರ್ಮಾಣ ಸಂಸ್ಥೆಗಳಿಗೆ ಸಿಎಂ ಕರೆ

|
Google Oneindia Kannada News

ಬೆಂಗಳೂರು, ಮೇ 12 : ನವಕರ್ನಾಟಕ ನಿರ್ಮಾಣದ ಧ್ಯೇಯವನ್ನು ಸಾಕಾರಗೊಳಿಸಲು ನಿರ್ಮಾಣ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟನಲಿಂಗ್ ಮತ್ತು ಅಂಡರ್ ಗ್ರೌಂಡಿಂಗ್ ಕನ್ಸ್‌ಟ್ರಕ್ಷನ್ ಕುರಿತಾದ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ 'ನಿರ್ಮಾಣ 2022'ಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶದ ನಿರ್ಮಾಣ ಕಾರ್ಯಗಳಲ್ಲಿ ನಿರ್ಮಾಣ ಸಂಸ್ಥೆಗಳು ತಮ್ಮ ವೃತ್ತಿಪರತೆ, ನಿರ್ವಹಣಾ ಕೌಶಲ್ಯಗಳೊಂದಿಗೆ ಸರ್ಕಾರದೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತದ ಆಶಯವನ್ನು ಸಾಕಾರಗೊಳಿಸಲು ಸರ್ಕಾರ ಮತ್ತು ಸಂಸ್ಥೆಗಳು ಉತ್ತಮ ದೇಶವನ್ನು ಕಟ್ಟಲು ಒಟ್ಟಾಗಿ ಶ್ರಮಿಸಬೇಕು. ಗುಡ್ಡಗಾಡು ಪ್ರದೇಶಗಳು ಹಾಗೂ ನಗರ ಪ್ರದೇಶಗಳಲ್ಲಿ ಅಂಡರ್‍‌ಗ್ರೌಂಡ್ ಕಾಮಗಾರಿಗಳಲ್ಲಿನ ಪರಿಣಿತಿಯೊಂದಿಗೆ ಸಂಸ್ಥೆಗಳು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

Construction companies should join hands with the government for develorment: CM Basavara Bommai

ಕರ್ನಾಟಕ ಆಧುನಿಕ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ :
ಸಾರ್ವಜನಿಕರ ಓಡಾಟಕ್ಕೆ ಸುಗಮವಾದ ದಾರಿ ಮಾಡಿಕೊಡುವುದು ಸಾರ್ಥಕವಾದ ಕಾರ್ಯ. ಕರ್ನಾಟಕ ಆಧುನಿಕ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಡ್ಯಾಂ, ಸುರಂಗ, ವಿದ್ಯುತ್ ಯೋಜನೆಗಳನ್ನು ಈಗಾಗಲೇ ನಿರ್ಮಿಸಿ ನಮ್ಮ ಹಿರಿಯರು ಉತ್ತಮ ಮಾರ್ಗ ಹಾಕಿಕೊಟ್ಟಿದ್ದಾರೆ. ರಾಜ್ಯದಲ್ಲಿ 1970ರಿಂದಲೂ ಬಹಳಷ್ಟು ಸುರಂಗಗಳನ್ನು ಕೊರೆಯಲಾಗಿದೆ. ಜಲವಿದ್ಯುತ್ ಯೋಜನೆಗಳಲ್ಲಿ ಪೆನ್‌ಸ್ಟಾಕ್‍ಗಳ ಸ್ಥಾಪನೆಗೆ ಸುರಂಗಗಳನ್ನು ಕೊರೆಯಲಾಗಿದೆ. ಮೆಟ್ರೋ ಕಾಮಗಾರಿಗಳಿಗೆ ಟನ್ನಲಿಂಗ್‌ನಿಂದ ಸುರಂಗಮಾರ್ಗಗಳನ್ನು ನಿರ್ಮಿಸಲಾಗಿದೆ ಎಂದರು.

ಕಾರ್ಮಿಕರ ಸುರಕ್ಷತೆಗೆ ಆದ್ಯತೆ ಸಿಗಲಿ:
'ನಗರ ಪ್ರದೇಶಗಳಲ್ಲಿ ಸುರಂಗಮಾರ್ಗ ನಿರ್ಮಿಸುವುದು ಸವಾಲಿನ ಕೆಲಸ. ಇಂತಹ ಸವಾಲುಗಳು ತಂತ್ರಜ್ಞಾನದ ಅಭಿವೃದ್ಧಿಗೆ ಪೂರಕವಾಗಿದೆ. ಕ್ಲಿಷ್ಟಕರ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಇಂಜಿನಿಯರ್ ಹಾಗೂ ಅಂಡರ್‍‌ಗ್ರೌಂಡ್ಸ್‌ ನಿರ್ಮಾಣ ಕಂಪನಿಗಳಿಗೆ ಅಭಿನಂದನೆಗಳು. ಕಾರ್ಮಿಕರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಅಂಡರ್‍‌ಗ್ರೌಂಡ್ಸ್‌ ಕಾಮಗಾರಿಗಳಲ್ಲಿ ದುಡಿಯುವ ಕಾರ್ಮಿಕರು ನಿಜವಾದ ದೇಶದ ಆಸ್ತಿಯಾಗಿದ್ದು, ಇವರ ಹಿತರಕ್ಷಣೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು' ಎಂದರು.

Construction companies should join hands with the government for develorment: CM Basavara Bommai

ಸವಾಲುಗಳಿಗೆ ತಕ್ಕಂತೆ ತಂತ್ರಜ್ಞಾನವೂ ಆಧುನೀಕರಣಗೊಂಡಿದೆ:
ಸುರಂಗ ಮಾರ್ಗವೂ ಸೇರಿದಂತೆ ಅಂಡರ್‍‌ಗ್ರೌಂಡ್ಸ್‌ ನಿರ್ಮಾಣಗಳು ಪ್ರಪಂಚಕ್ಕೆ ಹೊಸದಲ್ಲ. ಆದರೆ ಈ ನಿರ್ಮಾಣಗಳಲ್ಲಿ ಎದುರಾಗುವ ಸವಾಲುಗಳಿಗೆ ತಕ್ಕಂತೆ ತಂತ್ರಜ್ಞಾನವೂ ಆಧುನೀಕರಣಗೊಂಡಿದೆ. ಸುರಂಗಗಳು ರೈಲು, ರಸ್ತೆ ಸಾರಿಗೆಯಾಗಿ ಬಳಕೆಯಾಗುತ್ತಿತ್ತು. ಈಗ ಪೈಪ್‍ಲೈನ್‍ಗಳಲ್ಲಿ ಅನಿಲ, ನೀರಿನ ಸರಬರಾಜುಗಳಿಗೂ ಸುರಂಗಗಳನ್ನು ಬಳಸಲಾಗುತ್ತಿದೆ. ಸುರಂಗ ಮಾರ್ಗಗಳ ನಿರ್ಮಾಣದಲ್ಲಿ ಬೆಟ್ಟಗಳು, ಆಳವಾದ ಸಮುದ್ರ ಹೀಗೆ ಎದುರಾಗುವ ಎಲ್ಲ ತೊಡಕುಗಳನ್ನು ನಿವಾರಿಕೊಂಡು ಕಾಮಗಾರಿ ಮಾಡಲಾಗುತ್ತಿದೆ. ಹ್ಯಾಂಡ್‍ಮೇಡ್ ಸಣ್ಣ ಸುರಂಗಗಳಿಂದ ಹಿಡಿದು ದೊಡ್ಡ ಸುರಂಗಮಾರ್ಗಗಳ ನಿರ್ಮಾಣದವರೆಗೆ ತಂತ್ರಜ್ಞಾನದ ಬೆಳವಣಿಗೆಯಾಗಿದೆ. ಸುರಂಗ ಮಾರ್ಗಗಳ ನಿರ್ಮಾಣ ಕಾರ್ಯದಲ್ಲಿ ಎದುರಾಗುವ ಭೌಗೋಳಿಕ ಸವಾಲುಗಳು ಹಾಗೂ ತ್ಯಾಜ್ಯದ ನಿರ್ವಹಣೆಗೆ ವೈಜ್ಞಾನಿಕ ವ್ಯವಸ್ಥೆ ಅಗತ್ಯವಾಗಿದೆ ಎಂದರು.

Construction companies should join hands with the government for develorment: CM Basavara Bommai

ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿಯು 2000 ತರಬೇತಿ ಶಿಬಿರಗಳನ್ನು ದೇಶಾದ್ಯಂತ ನಡೆಸಿರುವುದು ಶ್ಲಾಘನೀಯ. ನಿರ್ಮಾಣ ಕ್ಷೇತ್ರದ ಅಭಿವೃದ್ಧಿಗೆ ಟನ್ನಲಿಂಗ್ ಮತ್ತು ಅಂಡರ್‍‌ಗ್ರೌಂಡ್ಸ್‌ ಕನ್ಸ್‌ಟ್ರಕ್ಷನ್ ಕುರಿತ ಸಮಾವೇಶ ಸಹಕಾರಿಯಾಗಲಿದೆ ಎಂದರು.

Recommended Video

ಹಿಂದಿ ಹೇರಿಕೆ ವಿರೋಧಿಸಿ ತಮಿಳು ಸಂಘಟನೆ ಜೊತೆ ಒಂದಾದ ಕನ್ನಡಿಗರ ಪ್ರತಿಭಟನೆ | Oneindia Kannada

English summary
Chief Minister Basavaraja Bommai said construction companies should join hands with the government to embrace Navakarnataka's mission for the New India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X