Kwin City: ಕ್ವಿನ್‌ ಸಿಟಿ ನಿರ್ಮಾಣ - ಉದ್ಯಮಕ್ಕೆ ಹೊಸ ಸಂಕಷ್ಟ!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಕ್ವಿನ್‌ ಸಿಟಿ ಯೋಜನೆಯ ಅನುಷ್ಠಾನ ಹಾಗೂ ಅದರ ಸುತ್ತಮುತ್ತಲಿನ ಭಾಗದ ಅಭಿವೃದ್ಧಿ ವಿಚಾರದಲ್ಲಿ ಭಾರೀ ದೊಡ್ಡ ತಲೆನೋವೊಂದು ಎದುರಾಗಿದೆ. ಬೆಂಗಳೂರಿನಲ್ಲಿ ಜನದಟ್ಟಣೆ ಹಾಗೂ ಟ್ರಾಫಿಕ್‌ ಜಾಮ್‌ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಸಮಸ್ಯೆಯನ್ನು ತಪ್ಪಿಸುವ ಉದ್ದೇಶ ಹಾಗೂ ನಗರದ ಮೇಲಿನ ಒತ್ತಡ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಕಾರಣಕ್ಕೆ ಬೆಂಗಳೂರಿನ ಹೊರ ವಲಯದಲ್ಲಿ ಕ್ವೀನ್‌ ಸಿಟಿಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಆದರೆ, ಈ ಯೋಜನೆಯ ಅನುಷ್ಠಾನಕ್ಕೆ ಪ್ರಾರಂಭಿಕ ಹಿನ್ನಡೆ ಎದುರಾಗಿದೆ.

ಬೆಂಗಳೂರಿನ ಮೇಲೆ ಆಗುತ್ತಿರುವ ಒತ್ತಡವನ್ನು ಕಡಿಮೆ ಮಾಡುವ ಅತ್ಯಂತ ಮುಖ್ಯ ಕಾರಣದಿಂದ ಈ ಯೋಜನೆಯನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈಗಾಗಲೇ ಬೆಂಗಳೂರಿನ ಮೇಲೆ ಸಾಕಷ್ಟು ಒತ್ತಡ ಸೃಷ್ಟಿಯಾಗುತ್ತಿದ್ದು. ಮುಂದಿನ ದಿನಗಳಲ್ಲಿ ಇನ್ನಷ್ಟು ಒತ್ತಡ ಬೀಳುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಕ್ವಿನ್‌ ಸಿಟಿಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರ ಹಾಗೂ ದಾಬಸ್‌ಪೇಟೆ ಮಾರ್ಗದಲ್ಲಿ ಈ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲು ನಿರ್ಧರಿಸಲಾಗಿದೆ. ಆದರೆ, ಈ ಅಭಿವೃದ್ಧಿ ಕಾಮಗಾರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ರೈತರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ರೈತರು ಹೇಳುತ್ತಿದ್ದಾರೆ.

Construction of Kwin City New problem as Industry Faces lack of land

ಕ್ವಿನ್‌ ಸಿಟಿಯ ಅಭಿವೃದ್ಧಿಯ ಜೊತೆ ಜೊತೆಗೆ ಈ ಭಾಗದ ಸುತ್ತಮುತ್ತಲಿ ಪ್ರದೇಶದ ಅಭಿವೃದ್ಧಿ ಹಾಗೂ ರಿಯಲ್‌ ಎಸ್ಟೇಟ್ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಇದೀಗ ಪ್ರಾರಂಭಿಕ ಹಿನ್ನಡೆಯಾಗುವ ಸಾಧ್ಯತೆ ಎದುರಾಗಿದೆ. ಶೈಕ್ಷಣಿಕ ಹಾಗೂ ವ್ಯಾಪಾರ ಕೇಂದ್ರೀತ ಅಭಿವೃದ್ಧಿಯನ್ನು ಈ ಭಾಗದಲ್ಲಿ ಮಾಡಲು ನಿರ್ಧರಿಸಲಾಗಿದೆ. ಆದರೆ, ರೈತರು ಈ ಯೋಜನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿ ಬಿಟ್ಟುಕೊಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ರೈತರ ಬೇಡಿಕೆ ಅಥವಾ ಒತ್ತಾಯದಲ್ಲೂ ಅರ್ಥವಿದೆ. ರೈತರು ಯಾವ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನುವ ವಿರೋಧ ಇಲ್ಲಿದೆ.

ಕರ್ನಾಟಕ ಸರ್ಕಾರವು ವಿದೇಶದವರು ಮತ್ತು ಹೊರ ರಾಜ್ಯದಲ್ಲಿನ ಉದ್ಯಮಿಗಳು, ಬಂಡವಾಳದಾರರಿಗೆ ಇಲ್ಲಿ ಮಣೆ ಹಾಕುತ್ತಿದೆ. ಈ ಭಾಗದಲ್ಲಿ ಉದ್ಯಮವನ್ನು ಪ್ರಾರಂಭಿಸುವುದಕ್ಕೆ ಫಲವತ್ತಾದ ಕೃಷಿ ಭೂಮಿಯನ್ನು ನೀಡಲು ನಿರ್ಧರಿಸುವುದು ಸರಿಯಲ್ಲ. ಅನ್ನ ಬೆಳೆಯುವ ಜಮೀನನ್ನು ನಾವು ನಮ್ಮ ಜೀವ ಹೋದರೂ ಕೊಡುವುದಿಲ್ಲ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷತೆಯಲ್ಲಿ ರೈತರು ಪ್ರತಿಭಟನೆ ಮಾಡಿದ್ದಾರೆ.

ದಾಬಸ್‌ಪೇಟೆ, ಆನೇಕಲ್ ಹಾಗೂ ನರಸಾಪುರ ಭಾಗದ ರೈತರಿಂದ ಈ ಸಂಬಂಧ ವಿರೋಧ ವ್ಯಕ್ತವಾಗುತ್ತಿದೆ. ರೈತರು ಈ ಭಾಗದಲ್ಲಿ ಭೂಮಿಯನ್ನು ಬಿಟ್ಟುಕೊಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಭಾಗದಲ್ಲಿ ಸಾವಿರಾರು ಎಕರೆ ಕೃಷಿ ಭೂಮಿಯನ್ನು ಉದ್ಯಮಗಳನ್ನು ಸ್ಥಾಪಿಸುವುದಕ್ಕೆ ಕೊಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಈ ರೀತಿ ಮಾಡಿದರೆ ಈ ಭಾಗದ ರೈತರು ಬೀದಿಗೆ ಬೀಳಲಿದ್ದಾರೆ ಎಂದು ರೈತರು ಕಣ್ಣೀರು ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+