S.M.Krishna: ಎಸ್.ಎಂ.ಕೃಷ್ಣಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬೆಂಗಳೂರು, ಮೇ, 11: ವಯೋಸಹಜ ಕಾಯಿಯಲೆ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಯೋಸಹಜ ಕಾಯಿಲೆ ಹಿನ್ನೆಲೆ ಕೆಲವು ದಿನಗಳ ಹಿಂದೆಯಷ್ಟೇ ಎಸ್.ಎಂ.ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಸದ್ಯ ಇದೀಗ ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದುಬಂದಿದೆ.

ಜ್ವರ, ಕೆಮ್ಮು ಹಿನ್ನೆಲೆ ಏಪ್ರಿಲ್ 21ರಂದು ಎಸ್.ಎಂ.ಕೃಷ್ಣ ಅವರನ್ನು ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಬಳಿಕ ಅವರನ್ನು ಡಿಸ್ಟಾರ್ಜ್ ಮಾಡಲಾಗಿತ್ತು. ಮತ್ತೆ ಕೆಲ ದಿನಗಳ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಇತ್ತೀಚೆಗಷ್ಟೇ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದರು. "ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿಯುತ್ತಿದ್ದೇನೆ. ನಮ್ಮ ವಯಸ್ಸಿನ ಬಗ್ಗೆ ಅರಿವಿರಬೇಕು. 90 ರಲ್ಲಿ 50ರ ತರಹ ನಟನೆ ಮಾಡಲು ಆಗುವುದಿಲ್ಲ. ಸಾರ್ವಜನಿಕ ಜೀವನದಿಂದ ದೂರ ಇರಬೇಕೆಂದು ತೀರ್ಮಾನ ಮಾಡಿದ್ದೇನೆ. ಆದ್ದರಿಂದ ನಾನು ಎಲ್ಲೂ ಈಗ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ" ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ್ದಾರೆ. ಮಾಧ್ಯಮದವರು ಬಿಜೆಪಿ ಹಳೆ ಮೈಸೂರು ವಿಭಾಗದ ಕಡೆ ಪಕ್ಷ ಸಂಘಟನೆ ಮುಂದಾದಾಗ ನಿಮ್ಮನ್ನು ಕರೆದಿಲ್ಲ ಎಂಬ ಕಾರಣಕ್ಕೆ ನಿಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ ಎಂದಿದ್ದಕ್ಕೆ, ನಾನೇ ರಿಟೈರ್ ಆಗುವಾಗ ಭಾರತೀಯ ಜನತಾ ಪಕ್ಷ ನನ್ನನ್ನು ಕಡೆಗಣಿಸಿದೆ ಎಂಬ ಪ್ರಶ್ನೆ ಬರಲ್ಲ. ನಾನು ವಯಸ್ಸಿಗೆ ಗೌರವ ಕೊಟ್ಟು ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದೇನೆ. ನನಗಿಂತ ಅಲ್ಲಿ ಸಕ್ರಿಯವಾಗಿ ರಾಜಕೀಯ ಮಾಡುತ್ತಿರುವವರು ಮತ್ತು ಪಕ್ಷ ಸಂಘಟನೆ ಮಾಡುವವರ ಅಗತ್ಯ ಎಂದು ಹೇಳಿದ್ದರು.
ರಾಜಕೀಯವಾಗಿ ನಿವೃತ್ತಿ ಬಗ್ಗೆ ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ನನಗೆ ಪೆನ್ಶನ್ ಕೊಡಲ್ಲ. ಆದ್ಅದರಿಂದ ಅವರ ಗಮನಕ್ಕೆ ತಂದಿಲ್ಲ. ನಾನೇ ಸ್ವಯಂ ಪ್ರೇರಿತರಾಗಿ ನಿವೃತ್ತಿ ಆಗುತ್ತಿರುವಾಗ ಇದರ ಬಗ್ಗೆ ಹೇಳುವುದಿಲ್ಲ. ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದರು












Click it and Unblock the Notifications