ಬೆಂಗಳೂರು ಅಭಿವೃದ್ಧಿಗಾಗಿ ಬಂತು ಸಮನ್ವಯ ಸಮತಿ

ಬೆಂಗಳೂರು, ಜೂ. 01 : ಬಿಬಿಎಂಪಿ ಡಾಂಬರೀಕರಣ ಮಾಡಿ ಹೋದ ಬಳಿಕ ಜಲಮಂಡಳಿ ಆ ರಸ್ತೆಯನ್ನು ಪೈಪ್ ಅಳಡಿಸಲು ಆಗೆಯುತ್ತಿತ್ತು. ಇನ್ನು ಮುಂದೆ ಇಂತಹ ಕೆಲಸಗಳಿಗೆ ಕಡಿವಾಣ ಬೀಳಲಿದೆ. ಹೌದು, ಬೆಂಗಳೂರು ಅಭಿವೃದ್ಧಿಗಾಗಿ ಸಮನ್ವಯ ಸಮಿತಿಯನ್ನು ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೆಂಗಳೂರು ಜಲ ಮಂಡಳಿ ಹಾಗೂ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಅಧಿಕಾರಿಗಳನ್ನು ಒಳಗೊಂಡ ಸಮನ್ವಯ ಸಮಿತಿ ರಚನೆಯಾಗಲಿದೆ. [ಜಯ­ನಗರಕ್ಕೊಂದು ಉತ್ತಮ ರಸ್ತೆ]

siddaramaiah

ಒಂದು ಸಂಸ್ಥೆ ಡಾಂಬರು ಹಾಕುವವರೆಗೂ ಸುಮ್ಮನಿದ್ದು, ಡಾಂಬರು ಹಾಕಿ ರಸ್ತೆಯನ್ನು ಅಭಿವೃದ್ಧಿಪಡಿಸಿದ ತಕ್ಷಣ ಮತ್ತೊಂದು ಸಂಸ್ಥೆ ಕಂಬ ನೆಡಲು ಅಥವಾ ಕೊಳವೆ ಸಂಪರ್ಕ ಕಲ್ಪಿಸಲು ರಸ್ತೆ ಅಗೆಯುವುದನ್ನು ತಡೆಗಟ್ಟಲು ಇಂತಹ ಸಮನ್ವಯ ಸಮಿತಿಯ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. [ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ ಮುಖ್ಯಾಂಶಗಳು]

ಶನಿವಾರ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ ಬಂದ ಬಳಿಕ ಸಮನ್ವಯ ಸಮಿತಿ ರಚನೆ ಮಾಡುವಂತೆ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ಸೂಚನೆ ಕೊಟ್ಟಿದ್ದಾರೆ.

ಜಲ ಮಂಡಳಿ ಅಗೆದಿತ್ತು : ಯಾವುದೇ ಕಾರಣಕ್ಕೂ ಮತ್ತೆ ಮತ್ತೆ ಅಗೆಯಲು ಅವಕಾಶ ಇಲ್ಲದಂತೆ ರಸ್ತೆ ನಿರ್ಮಿಸುವ ಉದ್ದೇಶದಿಂದ ಟೆಂಟರ್ ಶ್ಯೂರ್ ಯೋಜನೆಯಡಿ ನಗರದಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಕಳೆದ ವಾರ ಈ ಅಭಿವೃದ್ಧಿ ಪಡಿಸಿದ ರಸ್ತೆಯನ್ನೇ ಜಲಮಂಡಳಿ ಅಗೆದಿತ್ತು.

ಟೆಂಡರ್‌ ಶ್ಯೂರ್‌ ಯೋಜನೆಯಡಿ ಅಭಿವೃದ್ಧಿಪಡಿಸಿದ ಸೇಂಟ್‌ ಮಾರ್ಕ್ಸ್ ರಸ್ತೆಯ ಪಾದಚಾರಿ ಮಾರ್ಗವನ್ನು ಜಲಮಂಡಳಿ ತುರ್ತು ಕಾರ್ಯದ ನೆಪ ಹೇಳಿ ಅಗೆದಿತ್ತು. ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ರಚನೆ ಮಾಡುವಂತೆ ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+