Get Updates
Get notified of breaking news, exclusive insights, and must-see stories!

ಜೆಪಿ ನಗರದ ಗಣೇಶನಿಗೆ ಮುಸುಕಿನ ಜೋಳ, ಸೊಪ್ಪು ಅಲಂಕಾರ

ಬೆಂಗಳೂರು, ಸೆಪ್ಟೆಂಬರ್‌ 09: ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಆಲಂಕಾರವನ್ನು ಮಾಡಲಾಗಿದೆ ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದ್ದಾರೆ. ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರತಿ ಬಾರಿಯೂ ವಿಶೇಷ ಆಲಂಕಾರ ಹಾಗೂ ವಿಶೇಷ ಸಾಮಗ್ರಿಗಳನ್ನು ಬಳಸಿಕೊಂಡು ಗಣೇಶ ಮೂರ್ತಿಯನ್ನು ತಯಾರಿಸುವ ಮೂಲಕ ದೇಶದ ಗಮನವನ್ನ ಈ ದೇವಸ್ಥಾನ ಸೆಳೆಯುತ್ತಿತ್ತು. ಕರೋನಾ ಸಾಂಕ್ರಾಮಿಕ ಕಾರಣ ಕಳೆದ ವರ್ಷವೂ ಹೆಚ್ಚಿನ ಆಲಂಕಾರವಿಲ್ಲದೆ ಹಬ್ಬವನ್ನು ಆಚರಿಸಲಾಗಿತ್ತು. ಈ ಬಾರಿ ಸ್ವಲ್ಪ ಮಟ್ಟಿಗೆ ಕರೋನಾ ಮಹಾಮಾರಿ ಕಡಿಮೆ ಆಗಿರುವ ನಿಟ್ಟಿನಲ್ಲಿ, ಹಾಗೂ ಲಸಿಕಾ ಕಾರ್ಯವೂ ನಡೆದಿರುವ ನಿಟ್ಟಿನಲ್ಲಿ ವಿಶೇಷ ಆಲಂಕಾರವನ್ನು ಏರ್ಪಡಿಸಲಾಗಿದೆ.

ದೇವಸ್ಥಾನದಲ್ಲಿ ಇರುವ ಮೂರ್ತಿಗೆ ವಿಶೇಷ ಆಲಂಕಾರ

ದೇವಸ್ಥಾನದಲ್ಲಿ ಇರುವ ಮೂರ್ತಿಗೆ ವಿಶೇಷ ಆಲಂಕಾರ

ಪ್ರತ್ಯೇಕವಾಗಿ ಮೂರ್ತಿಯನ್ನು ಪ್ರತಿಷ್ಠಾಪಿಸದೇ ದೇವಸ್ಥಾನದಲ್ಲಿ ಇರುವ ಮೂರ್ತಿಗೆ ವಿಶೇಷ ಆಲಂಕಾರ ಮಾಡಲಾಗಿದೆ. ಮುಸುಕಿನ ಜೋಳ, ತರೇವಾರಿ ಹೂವುಗಳು ಹಾಗೂ ಸೊಪ್ಪುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ. ನಮ್ಮ ದೇವಸ್ಥಾನದ ಸಿಬ್ಬಂದಿಗಳು ಸಂಪೂರ್ಣ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ರಾಮ್‌ ಮೋಹನ ರಾಜ್‌ ತಿಳಿಸಿದರು.

ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌

ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌

ಪ್ರತಿಬಾರಿಯೂ ಭಕ್ತರಿಗೆ ಹೊಸದನ್ನು ನೀಡಬೇಕು ಎನ್ನುವ ಉದ್ದೇಶ ಹೊಂದಿರುವ ಜೆಪಿ ನಗರದ ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌, ಅದಕ್ಕೂ ಮುನ್ನ ಕಬ್ಬನ್ನು ಬಳಸಿ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು ಹಾಗೂ ಅದಕ್ಕೂ ಹಿಂದಿನ ವರ್ಷ 400 ಕೆಜಿ ಹತ್ತಿ ಬಳಸಿ ಬೃಹತ್‌ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು.

ತೆಂಗಿನ ಕಾಯಿ ಗಣೇಶ

ತೆಂಗಿನ ಕಾಯಿ ಗಣೇಶ

ತೆಂಗಿನ ಕಾಯಿ ಗಣೇಶ: 2019ರಲ್ಲಿ30 ಅಡಿ ಎತ್ತರದ ಪರಿಸರ ಸ್ನೇಹಿ ತೆಂಗಿನ ಕಾಯಿಯಿಂದ ನಿರ್ಮಿಸಲಾಗುವ "ತೆಂಗಿನ ಕಾಯಿ ಗಣೇಶ" ಮೂರ್ತಿ ನಿರ್ಮಿಸಿತ್ತು. 9 ಸಾವಿರ ತೆಂಗಿನ ಕಾಯಿ ಹಾಗೂ 3 ಸಾವಿರ ಏಳನೀರು ಬಳಸಿ 30 ಎತ್ತರದ ಗಣಪತಿಯನ್ನು ನಿರ್ಮಿಸಲಾಗಿತ್ತು. ಗಣೇಶ ಮೂರ್ತಿ ನಿರ್ಮಾಣಕ್ಕೆ 50 ಮಂದಿ ಕಳೆದ 21 ದಿನಗಳಿಂದ ಕೆಲಸ ಮಾಡಿದ್ದರು.

ಪರಿಸರ ಸ್ನೇಹಿಯಾಗಿ ಆಚರಣೆ

ಪರಿಸರ ಸ್ನೇಹಿಯಾಗಿ ಆಚರಣೆ

ಕಬ್ಬು ಗಣೇಶ: ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ದೃಷ್ಟಿಯಿಂದ ಈ ಬಾರಿ 30 ಅಡಿ ಎತ್ತರದ ಕಬ್ಬಿನಲ್ಲಿಯೇ ನಿರ್ಮಿಸಲಾಗಿರುವ ಗಣೇಶ ಮೂರ್ತಿ ನಿರ್ಮಿಸಲಾಗಿತ್ತು. 50 ಟನ್ ಕಬ್ಬನ್ನು ಬಳಸಲಾಗಿದ್ದು, 50 ಕ್ಕೂ ಹೆಚ್ಚು ಕಾರ್ಮಿಕರು ಈ ಗಣಪತಿಯನ್ನು ನಿರ್ಮಿಸಲು ಹಗಲಿರುಳು ಶ್ರಮಿಸಿದ್ದರು. ಜೊತೆಗೆ ಪ್ರಪ್ರಥಮ ಬಾರಿಗೆ ಜೆಪಿ ನಗರದ ಪುಟ್ಟೇನಹಳ್ಳಿಯಲ್ಲಿರುವ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 4 ಸಾವಿರ ಕೆಜಿ ತೂಕದ ಬೃಹದಾಕಾರದ ಲಾಡು ನಿರ್ಮಿಸಲಾಗಿತ್ತು.

ದೇವಸ್ಥಾನದಲ್ಲಿ ಮಾತ್ರೆ ಅಲಂಕಾರ

ದೇವಸ್ಥಾನದಲ್ಲಿ ಮಾತ್ರೆ ಅಲಂಕಾರ

ಮಾತ್ರೆ ಅಲಂಕಾರ: ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟದಲ್ಲಿ ಪ್ರಮುಖವಾಗಿ ಬಳಕೆ ಆಗಿರುವಂತಹ ವಸ್ತುಗಳಾದ ಮಾಸ್ಕ್‌, ಪ್ಯಾರಾಸಿಟಮಾಲ್‌, ವಿಟಮಿನ್‌ ಸಿ, ಆಲ್ಕಾಫ್‌, ಬಿ ಕಾಂಫ್ಲೆಕ್ಸ್‌ ನಂತಹ ಮಾತ್ರೆಗಳನ್ನೇ ಬಳಸಿಕೊಂಡು ಬೇರೆ ಯಾರೂ ಮಾಡದಂತಹ ವಿಶಿಷ್ಟವಾದ ಆಲಂಕಾರವನ್ನು ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ಮಾಡಲಾಗಿತ್ತು. ಜುಲೈ 24, 2021ರಿಂದ ಒಂದು ವಾರಗಳ ಕಾಲ ಈ ಆಲಂಕಾರ ದರ್ಶನಕ್ಕೆ ಮುಕ್ತವಾಗಿತ್ತು. ನಂತರ ಬಡಜನರಿಗೆ ಉಚಿತವಾಗಿ ಹಂಚಲಾಯಿತು ಎಂದು ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್‌ನ ಟ್ರಸ್ಟಿ ರಾಮ್ ಮೋಹನ ರಾಜ್ ತಿಳಿಸಿದರು.

ಬಡಜನರಿಗೆ ಉಚಿತವಾಗಿ ಹಂಚಲಾಯಿತು

ಬಡಜನರಿಗೆ ಉಚಿತವಾಗಿ ಹಂಚಲಾಯಿತು

ಅಪಾರ ವೆಚ್ಚ ಮಾಡಿ ಮಾಡುವ ಆಲಂಕಾರ ಜನರಿಗೆ ಉಪಯೋಗವಾಗುವಂತಿರಬೇಕು ಹಾಗೂ ವಿಭಿನ್ನವಾಗಿರಬೇಕು ಎನ್ನುವ ಉದ್ದೇಶದಿಂದ ಕರೋನಾ ವಿರುದ್ದದ ಹೋರಾಟದಲ್ಲಿ ಪ್ರಮುಖವಾಗಿ ಬಳಸಲಾಗುತ್ತಿರುವ ವಸ್ತುಗಳನ್ನು ಬಳಸಿಕೊಂಡು ಆಲಂಕಾರ ಮಾಡಲಾಗಿದೆ. ಈ ಆಲಂಕಾರದಲ್ಲಿ ಬಳಸಿಕೊಂಡಿರುವ ಎಲ್ಲಾ ಔಷಧ ಹಾಗೂ ರೇಷನ್‌ ಕಿಟ್‌ನ ಪದಾರ್ಥಗಳನ್ನು ಮಾನವರು, ಹಸುಗಳು ಹಾಗೂ ನಾಯಿಗಳಿಗೆ ದಾನದ ರೂಪದಲ್ಲಿ ನೀಡಲಾಗಿದೆ. ರೇಷನ್‌ ಕಿಟ್‌ ವಸ್ತುಗಳಾದ ಅಕ್ಕಿ, ಬೇಳೆ ಗೋಧಿ ಹಿಟ್ಟು, ಮೈದಾ ಹಿಟ್ಟು, ಸಕ್ಕರೆ, ಉಪ್ಪು, ರವೆ, ಎಣ್ಣೆ, ಈರುಳ್ಳಿ, ಮೆಕ್ಕೆ ಜೋಳ, ಬಿಸ್ಕತ್‌, ತೆಂಗಿನಕಾಯಿ ಎಲ್ಲವನ್ನು ದಾನವಾಗಿ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+