ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೊರೊನಾ ಮೂರನೇ ಅಲೆ ಸಿದ್ಧತೆ ಚರ್ಚೆ
ಬೆಂಗಳೂರು, ಜೂನ್ 28: ಶನಿವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆದಿದ್ದು, ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಕುರಿತು ಹಲವು ವಿಷಯಗಳನ್ನು ಚರ್ಚಿಸಲಾಗಿದೆ.
ಜಿಲ್ಲಾ ಪದಾಧಿಕಾರಿಗಳು ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸಿದ್ದು, ಕೊರೊನಾ ಮೂರನೇ ಅಲೆ ಸಿದ್ಧತೆಗಳ ಕುರಿತು ಚರ್ಚೆ ನಡೆಸಿರುವುದಾಗಿ ರಾಜ್ಯ ಮುಖ್ಯ ವಕ್ತಾರ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
"ಕೊರೊನಾ ವಿಚಾರದಲ್ಲಿ ಅರುಣ್ ಸಿಂಗ್ ಕರ್ನಾಟಕವನ್ನು ಹೊಗಳಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ದೇಶಕ್ಕೆ ಮಾದರಿ ಎಂದು ಹೇಳಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಯಶಸ್ವಿಯಾಗಿದೆ. ಆದರೆ ಆರಂಭದಲ್ಲಿ ಕಾಂಗ್ರೆಸ್ ವಿರೋಧಿ ಚಟುವಟಿಕೆ ಮಾಡಿತು" ಎಂದು ಕಾಂಗ್ರೆಸ್ ಪಕ್ಷವನ್ನು ದೂರಿದರು.

"ಸೇವಾ ಹೀ ಸಂಘಟನೆ ಹೆಸರಲ್ಲಿ ಸಂಘಟನೆ ಮಾಡಲು ಅವರು ಸೂಚಿಸಿದ್ದಾರೆ. ಲಸಿಕೆ ಪಡೆಯಲು ಬೂತ್ ಮಟ್ಟದ ಕಾರ್ಯಕ್ರಮ ಯೋಜನೆ ಮಾಡಲಾಗುವುದು" ಎಂದು ಭರವಸೆ ನೀಡಿದರು.
"ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು ಅದರ ಬಗ್ಗೆ ಚರ್ಚೆಯಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಲು ನಿರ್ಧಾರ ಮಾಡಲಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡಿವೆ" ಎಂದು ತಿಳಿಸಿದರು.












Click it and Unblock the Notifications