• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೋನಾ ನೆಪದಲ್ಲಿ 10 ಸಾವಿರ ಕೋಟಿಯ ಬೃಹತ್ ಹಗರಣ: ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ

|

ಬೆಂಗಳೂರು, ಅ. 22: ಕೊರೊನಾ ನೆಪದಲ್ಲಿ ಸುಮಾರು 10 ಸಾವಿರ ಕೋಟಿಗಳಷ್ಟು ಬೃಹತ್ ಹಗರಣವನ್ನು ರಾಜ್ಯ ಬಿಜೆಪಿ ಸರ್ಕಾರ ನಡೆಸಿದೆ. ಅಲ್ಲದೇ ಹೋಮ್ ಐಸೋಲೇಷನ್ ಇರುವವರಿಗೆ ಕಿಟ್ ನೀಡಲಾಗುವುದು ಎಂದು ಹೇಳಿ ಯಾವುದೇ ಕಿಟ್ ನೀಡಿಲ್ಲ ಆದರೆ ಕಿಟ್ ನೀಡಲಾಗಿದೆ ಎಂದು ಸುಮಾರು ₹150 ಕೋಟಿ ಹಣ ದೋಚಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಮುಖ್ಯ ವಕ್ತಾರ ಶರತ್ ಖಾದ್ರಿ ಇದ್ದರು.

ಗುರುವಾರ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕಾಲ್ ಸೆಂಟರ್‌ಗಳ ಮೂಲಕ ಸೋಂಕಿತರಿಗೆ ಕರೆ ಮಾಡಲು ಸರ್ಕಾರವೇ ತಿಳಿಸಿರುವಂತೆ ₹69 ನೀಡಲಾಗುತ್ತಿದೆ. ಸುಮ್ಮನೆ ಅಂದಾಜು ಲೆಕ್ಕ ಹಾಕಿದರೂ 8 ಲಕ್ಷ ಜನರಿಗೆ 5 ಬಾರಿ ಕರೆ ಮಾಡಲು ನೂರಾರು ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ 50 ರೂ ನೀಡಿ ಹಣ ದೋಚಲಾಗಿದೆ ಎಂದು ಹೇಳಿದರು.

ದೀಪಾವಳಿ ಮತ್ತು ದಸರಾ ಹಬ್ಬಕ್ಕೆ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಪರ್ ಕೊಡುಗೆ ನೀಡುತ್ತಿದ್ದು 3 ನೇ ಸ್ಥಾನದಿಂದ 2 ನೇ ಸ್ಥಾನಕ್ಕೆ ಕೊಂಡೊಯ್ಯಲಿದ್ದಾರೆ ಎಂದು ವ್ಯಂಗ್ಯವಾಡಿದರು.

   CSK ತಂಡದ DJ Bravo ಇನ್ನುಳಿದ ಪಂದ್ಯದಲ್ಲಿ ಆಗೋದಿಲ್ಲ , ಏಕೆ | Oneindia Kannada

   ದೆಹಲಿ ಮಾದರಿಯನ್ನು ಅನುಸರಿಸಿ ಎಂದು ಸ್ವತಃ ಪ್ರಧಾನಿಗಳೇ ಹೇಳಿದ್ದರೂ ನಮ್ಮ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿತು. ವೈಯಕ್ತಿಕವಾಗಿ ನಾನೇ ನಮ್ಮ ರಾಜ್ಯದ ಆರೋಗ್ಯ ಮಂತ್ರಿಗಳಿಗೆ ಕರೆ ಮಾಡಿ, ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದರು ಸ್ಪಂದಿಸಲಿಲ್ಲ ಎಂದರು.

   English summary
   The state BJP government has done a huge scam worth nearly ₹ 10,000 crore during Corona pandemic. Government had assured that a medical kit will be given to all the patients under home isolation said Prithvi Reddy, AAP, Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X