ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊರೊನಾ ಹೆಲ್ಪ್ ಡೆಸ್ಕ್ ಆರಂಭ

|
Google Oneindia Kannada News

ಬೆಂಗಳೂರು, ಜನವರಿ 31 : ಕೊರೊನಾ ವೈರಸ್ ಭಾರತದಲ್ಲಿ ಹರಡದಂತೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೂ ಚೀನಾದಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ.

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೊನಾ ವೈರಸ್ ಹೆಲ್ಪ್ ಡೆಸ್ಕ್ ಆರಂಭಿಸಲಾಗಿದೆ.

ಕೊರೊನಾ ವೈರಸ್: ವಿಶ್ವ ತುರ್ತು ಪರಿಸ್ಥಿತಿ ಘೋಷಿಸಿದ ಆರೋಗ್ಯ ಸಂಸ್ಥೆ ಕೊರೊನಾ ವೈರಸ್: ವಿಶ್ವ ತುರ್ತು ಪರಿಸ್ಥಿತಿ ಘೋಷಿಸಿದ ಆರೋಗ್ಯ ಸಂಸ್ಥೆ

ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ ಹೆಲ್ಪ್ ಡೆಸ್ಕ್ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಧರ್ಮೇಂದ್ರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊರೊನಾ ವೈರಸ್: ತ್ರಿಪುರದ ವ್ಯಕ್ತಿ ಮಲೇಷ್ಯಾದಲ್ಲಿ ಸಾವುಕೊರೊನಾ ವೈರಸ್: ತ್ರಿಪುರದ ವ್ಯಕ್ತಿ ಮಲೇಷ್ಯಾದಲ್ಲಿ ಸಾವು

Corona Virus Helpdesk Opened At Bengaluru Airport

ವಿಶ್ಯಾದ್ಯಂತ ಕೊರೊನಾ ವೈರಸ್ ಹರಡುತ್ತಿದೆ. ಚೀನಾದಲ್ಲಿ ಮೊದಲು ಪತ್ತೆಯಾದ ಈ ವೈರಸ್ ಕರ್ನಾಟಕಕ್ಕೆ ಕಾಲಿಡದಂತೆ ಅಗತ್ಯ ಎಚ್ಚರಿಕೆಗಳನ್ನು ವಹಿಸಲಾಗುತ್ತಿದೆ. ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಿಗಳ ಆಸ್ಪತ್ರೆಯಲ್ಲಿ ವೈರಸ್ ಹರಡಿರುವ ಶಂಕೆಯ ಮೇಲೆ ರೋಗಿಯೊಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ ವೈರಾಣು ಬಗ್ಗೆ ಭಯವಿದ್ದರೆ ಈ ಸಂಖ್ಯೆಗೆ ಕರೆ ಮಾಡಿ! ಕೊರೊನಾ ವೈರಾಣು ಬಗ್ಗೆ ಭಯವಿದ್ದರೆ ಈ ಸಂಖ್ಯೆಗೆ ಕರೆ ಮಾಡಿ!

ಚೀನಾದ ಪ್ರವಾಸಕ್ಕೆ ತೆರಳಿದ್ದ ಮುಂಬೈನ ಇಬ್ಬರಿಗೆ ವೈರಸ್ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದಲ್ಲಿ ಒಬ್ಬ ನರ್ಸ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊರೊನಾ ವೈರಸ್ (ತೀವ್ರ ಉಸಿರಾಟದ ಸಿಂಡ್ರೋಮ್) ಆಗಿದ್ದು ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವೈರಸ್‌ಗೆ 2019 ಎನ್‌ಸಿಓವಿ ಎಂದು ನಾಮಕರಣ ಮಾಡಿದೆ. ವೈರಸ್ ದೇಹಕ್ಕೆ ಸೇರಿದರೆ ನ್ಯೂಮೊನಿಯಾ ಮತ್ತಿತರ ಉಸಿರಾಟದ ತೊಂದರೆಗಳು ಉಂಟಾಗುತ್ತವೆ.

ವೈರಸ್ ಸಾಮಾನ್ಯವಾಗಿ ನಾಯಿ, ಬೆಕ್ಕು, ಹಾವು, ಬಾವಲಿ ರೀತಿಯ ಪ್ರಾಣಿಗಳಲ್ಲಿ ಕಂಡು ಬರುತ್ತದೆ. ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದೆ. ಕೆಮ್ಮು, ಸೀನು, ಹಸ್ತಲಾಘವದ ಮೂಲಕವೂ ವೈರಸ್ ಹರಡುತ್ತದೆ.

English summary
Karnataka health department opened help desk at Bengaluru International Airport. Bengaluru airport has no direct flight connecting the affected cities in China.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X