ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ದುಪ್ಪಟ್ಟು ಏರಿಕೆ

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16: ಕರ್ನಾಟಕದಲ್ಲಿ ಬಹುದಿನಗಳಿಂದ ಇಳಿಕೆಯಾಗಿದ್ದ ಕೊರೊನಾ ಪ್ರಕರಣ ಸಂಖ್ಯೆ ಬುಧವಾರ ಮತ್ತೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಸಾವಿರದ ಕೆಳಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುವ ಸೂಚನೆಯನ್ನು ನೀಡಿದೆ.

ಅದರಲ್ಲೂ ಬೆಂಗಳೂರಿನಲ್ಲಿ ಹಿಂದಿನ ದಿನಕ್ಕೆ ಹೋಲಿಸಿದರೆ, ಬುಧವಾರ ದಾಖಲಾದ ಹೊಸ ಕೊರೊನಾ ಪ್ರಕರಣಗಳಲ್ಲಿ 100% ಏರಿಕೆಯಾಗಿದೆ.

 ಬೆಂಗಳೂರಿನಲ್ಲಿ ಡೆಲ್ಟಾ ರೂಪಾಂತರಿಯ 2 ಪ್ರಭೇದಗಳು ಪತ್ತೆ, ಆತಂಕ ಬೆಂಗಳೂರಿನಲ್ಲಿ ಡೆಲ್ಟಾ ರೂಪಾಂತರಿಯ 2 ಪ್ರಭೇದಗಳು ಪತ್ತೆ, ಆತಂಕ

ಸೆಪ್ಟೆಂಬರ್ 10ರಿಂದಲೂ ಕರ್ನಾಟಕದಲ್ಲಿ ಕಡಿಮೆ ಪ್ರಕರಣಗಳು ದಾಖಲಾಗುತ್ತಿದ್ದವು. ಬುಧವಾರ ರಾಜ್ಯದಲ್ಲಿ ಒಟ್ಟಾರೆ 1116 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ವಾರದ ನಂತರ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.

Bengaluru Coronavirus: 100 Percent Rise In New Corona Cases

ಒಂದೇ ದಿನದಲ್ಲಿ ಏಕಾಏಕಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ 231 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಬುಧವಾರ ಆ ಸಂಖ್ಯೆ ದುಪ್ಪಟ್ಟಾಗಿದೆ. ಅಂದರೆ, 462 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆ:
ಬೆಂಗಳೂರು ನಗರದಲ್ಲಿ ಬುಧವಾರ 462 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1242332ಕ್ಕೆ ಏರಿಕೆಯಾಗಿದೆ. 5 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 16065ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಈವರೆಗೂ ಸೋಂಕು ತಗುಲಿದ 1218938 ಮಂದಿ ಗುಣಮುಖರಾಗಿದ್ದಾರೆ.

ಅಲೆಗಳ ಆಟ: ಕರ್ನಾಟಕದಲ್ಲಿ ಮತ್ತೆ 1,000 ಗಡಿ ದಾಟಿದ ಕೊರೊನಾವೈರಸ್! ಅಲೆಗಳ ಆಟ: ಕರ್ನಾಟಕದಲ್ಲಿ ಮತ್ತೆ 1,000 ಗಡಿ ದಾಟಿದ ಕೊರೊನಾವೈರಸ್!

ಆದರೆ ಒಂದು ದಿನದಲ್ಲಿ ಪ್ರಕರಣ ಏರಿಕೆಯಾಗಿರುವುದನ್ನು ಪರಿಗಣಿಸಿ ಪರಿಸ್ಥಿತಿ ಕುರಿತು ನಿರ್ಧರಿಸಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ. ರಣದೀಪ್ ಹೇಳಿದ್ದಾರೆ. ಹಬ್ಬದ ಕಾರಣದಿಂದಾಗಿ ಸೋಂಕು ಹರಡುವಿಕೆ ಹೆಚ್ಚಾಯಿತೇ ಎಂಬುದು ತಿಳಿದಿಲ್ಲ. ಹೀಗಾಗಿ ವಾರದ ಪ್ರಕರಣಗಳನ್ನು ಗಣನೆಗೆ ತೆಗೆದುಕೊಳ್ಳುವುದು ಸೂಕ್ತ. ಇದರಿಂದ ಕೊರೊನಾ ಸ್ಥಿತಿಗತಿಯಲ್ಲಿನ ಬದಲಾವಣೆಗಳನ್ನು ಗಮನಿಸಬಹುದಾಗಿದೆ ಎಂದು ಹೇಳಿದ್ದಾರೆ.

ಅಧೀಕೃತ ಮಾಹಿತಿ ಪ್ರಕಾರ, ಕಳೆದ ಏಳು ದಿನಗಳಲ್ಲಿ ರಾಜ್ಯದಲ್ಲಿ ಒಟ್ಟಾರೆ 5993 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಅದಕ್ಕೂ ಹಿಂದಿನ ವಾರದಲ್ಲಿ 7486 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ವಾರ ಪ್ರಕರಣಗಳ ಸಂಖ್ಯೆ 19.9% ರಷ್ಟು ಇಳಿಕೆಯಾಗಿದೆ.

Bengaluru Coronavirus: 100 Percent Rise In New Corona Cases

ಕೊರೊನಾ ಪರೀಕ್ಷಾ ದರ ಹೆಚ್ಚಳವಾಗಿದ್ದು ಕೂಡ ಬುಧವಾರದ ಕೊರೊನಾ ಪ್ರಕರಣಗಳ ಸಂಖ್ಯೆಯನ್ನು ಹೆಚ್ಚಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ರಾಜ್ಯಾದ್ಯಂತ 1.70 ಲಕ್ಷ ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸೆಪ್ಟೆಂಬರ್ 10-14ರ ನಡುವೆ, ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಇದ್ದಾಗ ಸರಾಸರಿ 1.22 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಬುಧವಾರ 35,790 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,34,516 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,70,306 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ಈವರೆಗೂ ಒಟ್ಟು 4,56,89,893 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ ಬುಧವಾರ ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.65ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.71ರಷ್ಟಿದೆ. ಬುಧವಾರ 1116 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 970 ಸೋಂಕಿತರು ಗುಣಮುಖರಾಗಿದ್ದಾರೆ. 8 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಈವರೆಗೂ 37537 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2964083ಕ್ಕೆ ಏರಿಕೆಯಾಗಿದೆ. ಒಟ್ಟು 2910626 ಸೋಂಕಿತರು ಗುಣಮುಖರಾಗಿದ್ದು. 15892 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Recommended Video

ತಾಲಿಬಾನ್ ಮೇಲೆ ದಾಳಿ ಮಾಡಲು ಭಾರತದ ಸೇನೆಯ ಸಹಾಯ ಕೋರಿದ ಅಮೆರಿಕ | Oneindia Kannada

English summary
Increase in new coronavirus cases noticed in Bengaluru Urban, which recorded 462 new cases, comprising a 100 per cent increase over the 231 cases recorded on Tuesday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X